ಸ್ಲಂ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಮೀಸಲಿಡಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದ ಕೊಳಚೆ ಪ್ರದೇಶಗಳಲ್ಲಿ ಯಾವುದೇ ನಾಗರಿಕ ಸೌಲಭ್ಯಗಳು ಇಲ್ಲದೇ ಸ್ಥಳೀಯ ಸ್ಲಂ ನಿವಾಸಿಗಳು ತೊಂದರೆ ಅನುಭವಿಸುತ್ತಿದ್ದಾರೆ. ನಗರದ ಶೇ.90ರಷ್ಟು ಕೊಳಗೇರಿ ಜನರು ನಗರಸಭೆಗೆ ತಮ್ಮ ಆಸ್ತಿ ತೆರಿಗೆಯನ್ನು ಕಟ್ಟುತ್ತಾರೆ. ಆದರೆ ನಗರಸಭೆಯಿಂದ ಸ್ಲಂ ಪ್ರದೇಶಗಳ ಅಭಿವೃದ್ಧಿ ಮಾಡುವಲ್ಲಿ ತಾರತಮ್ಯ ಮಾಡುತ್ತಿದ್ದು, ಈ ಬಾರಿ ನಗರಸಭೆಯ ಬಜೆಟ್‌ನಲ್ಲಿ ಅವಳಿ ನಗರದ ಕೊಳಗೇರಿ ಪ್ರದೇಶಗಳ ಅಭಿವೃದ್ಧಿಗಾಗಿ ಪ್ರತ್ಯೇಕ ಅನುದಾನ ಮೀಸಲಿಡಬೇಕೆಂದು ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ ಆರ್.ಮಾನ್ವಿ ಒತ್ತಾಯಿಸಿದರು.

Advertisement

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕರೆದಿದ್ದ ನರಗಸಭೆಯ 2025-26ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಬಜೆಟ್ ಪೂರ್ವಭಾವಿ ಸಭೆಯನ್ನು ಕರೆಯಲಾಗುತ್ತಿದೆ. ಸಭೆಯಲ್ಲಿ ಅನೇಕ ಸಂಘ-ಸಂಸ್ಥೆಗಳ ಮುಖಂಡರು ನಗರದ ಅಭಿವೃದ್ಧಿಗಾಗಿ ಸಲಹೆಗಳನ್ನು ನೀಡುತ್ತಾರೆ. ಆದರೆ ಸಾರ್ವಜನಿಕರು ನೀಡಿರುವ ಅಭಿಪ್ರಾಯಗಳಿಗೆ ಆದ್ಯತೆ ನೀಡದೇ ತಮಗೆ ಮನಬಂದಂತೆ ಬಜೆಟ್ ತಯಾರಿಸಿ ಅನುದಾನ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಕೇವಲ ಕಾಟಾಚಾರಕ್ಕಾಗಿ ಬಜೆಟ್ ಪೂರ್ವಭಾವಿ ಸಭೆಯನ್ನು ಕರೆಯಲಾಗುತ್ತಿದ್ದು, ಇದನ್ನು ಕೈಬಿಟ್ಟು ಸಂಘ-ಸಂಸ್ಥೆಗಳ ಮುಖಂಡರು ನೀಡಿರುವ ಸಲಹೆಗಳನ್ನೂ ಸ್ವೀಕರಿಸಿ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.


Spread the love

LEAVE A REPLY

Please enter your comment!
Please enter your name here