ನವದೆಹಲಿ: ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ನವದೆಹಲಿಯಲ್ಲಿ ಮಾತನಾಡಿದ ಅವರು, ತಿರುಪತಿ ಪ್ರಸಾದದ ವಿಚಾರವಾಗಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು. ತಿರುಪತಿಯಲ್ಲಿ ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸಿದ ಕಾರಣ ರಾಜ್ಯದಲ್ಲಿನ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ತಕ್ಷಣ ಪರೀಕ್ಷೆಗೆ ಒಳಪಡಿಸುವುದು ಒಳಿತು.
ಹಿಂದೂಗಳ ಪವಿತ್ರ ಕ್ಷೇತ್ರವಾದ ತಿರುಮಲ ತಿರುಪತಿಯಲ್ಲಿ ಪ್ರಸಾದಕ್ಕೆ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಬಳಸುತ್ತಿದ್ದರು ಎಂಬ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ ಎಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ ಎಂದು ಪ್ರತಿಕ್ರಿಯಿಸಿದ್ದಾರೆ. ಅಷ್ಟೇ ಅಲ್ಲ, ತಿರುಮಲ ತಿರುಪತಿಯ ಟ್ರಸ್ಟ್ ನಲ್ಲಿ ಜಗನ್ ರೆಡ್ಡಿ ಅವರು ಹಿಂದೂಯೇತರರನ್ನೂ ಟ್ರಸ್ಟ್ ಸದಸ್ಯರನ್ನಾಗಿ ಮಾಡಿದ್ದರು ಎಂದು ಆರೋಪಿಸಿದ್ದಾರೆ.



