ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದ್ರೂ, ಅದು ಮನುಷ್ಯರಿಗೆ ಹರಡುವುದು ಅಪರೂಪ: ದಿನೇಶ್ ಗುಂಡೂರಾವ್

0
Spread the love

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದ್ರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಿನಕ್ಕೊಂದು ಜಿಲ್ಲೆ, ದಿನಕ್ಕೊಂದು ಊರು ಎಂದು ರಾಜ್ಯದಲ್ಲಿ ಹಕ್ಕಿಜ್ವರ ವ್ಯಾಪಿಸುತ್ತಲೇ ಇದ್ದು, ಬಳ್ಳಾರಿಯಲ್ಲಿ ಹಕ್ಕಿಜ್ವರ ಅಬ್ಬರಕ್ಕೆ ಇಡೀ ಕೋಳಿ ಫಾರಂಗಳೇ ಖಾಲಿ ಆಗುತ್ತಿವೆ.

Advertisement

ಇದರ ಬೆನ್ನಲ್ಲೇ ಹಕ್ಕಿಜ್ವರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಅವರು ” ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದೆ. ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ.‌ ಹಾಗಾಗಿ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ.

ಆದರೂ ಮೊಟ್ಟೆ ಮತ್ತು ಮಾಂಸವನ್ನು ಸೇವಿಸುವಾಗ ಕೆಲ ಎಚ್ಚರಿಕೆಗಳನ್ನು ಪಾಲಿಸಬೇಕು. ಮೊಟ್ಟೆ ಮತ್ತು ಮಾಂಸವನ್ನು 70 ಡಿಗ್ರಿ ಉಷ್ಣಾಂಶದಲ್ಲಿ ಅರ್ಧಗಂಟೆಗೂ ಹೆಚ್ಚು ಕಾಲ ಬೇಯಿಸಿ ಸೇವಿಸಬೇಕು. ಸೋಂಕು ಪೀಡಿತ ಕೋಳಿ ಫಾರಂ, ಮೃತ ಹಕ್ಕಿ ಅಥವಾ ಕೋಳಿಗಳ ಸಮೀಪಕ್ಕೆ ಹೋಗದೆ ಎಚ್ಚರಿಕೆ ವಹಿಸಬೇಕು ಎಂದಿದ್ದಾರೆ.

 


Spread the love

LEAVE A REPLY

Please enter your comment!
Please enter your name here