ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಅವರು ಅಮರಶಿಲ್ಪಿ ಜಕಣಾಚಾರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಸುರೇಶ ಅಕ್ಕಸಾಲಿಗರ ಅವರು ಅಮರಶಿಲ್ಪಿ ಜಕಣಾಚಾರಿಯವರ ಕುರಿತು ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಸಮಾಜದ ಹಿರಿಯ ಶಿಲ್ಪಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀಕ್ಷಕ ರಾಜಕುಮಾರ ಸೋಪಡ್ಲಾ, ಮೌನೇಶ ಬಡಿಗೇರ, ಮೌನೇಶ ಅಕ್ಕಸಾಲಿಗರ, ಗೋಪಾಲ ಬಡಿಗೇರ, ಅಶೋಕ ಸುತಾರ, ವೆಂಕಟೇಶ ಸುತಾರ, ಕುಸುಮಾ ಸುತಾರ ಸೇರಿದಂತೆ ಸಮಾಜದ ಗಣ್ಯರು, ಹಿರಿಯರು ಹಾಜರಿದ್ದರು.



