ವಿಜಯಸಾಕ್ಷಿ ಸುದ್ದಿ, ಗದಗ: ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕುರಿತು ಪೂರ್ವಸಿದ್ಧತಾ ಸಭೆಯು ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿತು.
ಜನವರಿ 1ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರ ಅನುಮತಿ ಪಡೆದು ಸಮುದಾಯದ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಗೆ ಕ್ರಮ ವಹಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಮುದಾಯದ ಅಧ್ಯಕ್ಷರು, ಪ್ರಮುಖರು, ಹಿರಿಯರು ಹಾಜರಿದ್ದರು.



