ಬೆಂಗಳೂರು: ಮುಸ್ಲಿಮರಿಗೆ ಮೀಸಲಾತಿ ಕೊಡುವುದಕ್ಕೆ ಅಂಬೇಡ್ಕರ್ ಒಪ್ಪಲಿಲ್ಲ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮ ಭಾರತದ ಸಂವಿಧಾನ ರಚನೆಯಾದಾಗ ಮತದ ಆಧಾರದ ಮೇಲೆ ಮೀಸಲಾತಿ ಕೊಡುವ ಬಗ್ಗೆ ಚರ್ಚೆ ನಡೆಯಿತು.
ಆಗ ಮುಸ್ಲಿಮರಿಗೆ ಮೀಸಲಾತಿ ಕೊಡುವ ಬಗ್ಗೆಯೂ ಮಾತು ಬಂತು. ಆದರೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಇದಕ್ಕೆ ಒಪ್ಪಲಿಲ್ಲ ಎಂದರು ಹೇಳಿದರು. ಅಂಬೇಡ್ಕರ್ ಅವರ ಪ್ರಕಾರ ಮತದ ಆಧಾರದ ಮೇಲೆ ಮೀಸಲಾತಿ ಕೊಡುವುದು ಸಂವಿಧಾನಬಾಹಿರವಾಗಿದೆ.
ಸಂವಿಧಾನಕ್ಕೆ, ಅಂಬೇಡ್ಕರ್ ಚಿಂತನೆಗಳಿಗೆ ವಿರುದ್ಧವಾಗಿ ವರ್ತಿಸುವವರು ಮಾತ್ರ ಮತದ ಆಧಾರದ ಮೇಲೆ ಮೀಸಲಾತಿ ಕೊಡುವ ಬಗ್ಗೆ ಯೋಚಿಸುತ್ತಾರೆ. ಇದನ್ನು ನಾನು ಖಂಡಿಸುತ್ತೇನೆ ಎಂದಿದ್ದಾರೆ.



