ಎಂ.ಬಿ.ಎಚ್. ಶಿಕ್ಷಣ ಮಹಾವಿದ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ವಿದ್ಯಾದಾನ ಸಮಿತಿಯ ಶ್ರೀಮತಿ ಎಂ.ಬಿ. ಹುಯಿಲಗೋಳ ಶಿಕ್ಷಣ ಮಹಾವಿದ್ಯಾಲಯದಲ್ಲಿ ಭಾರತದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರರ 134ನೇ ಜಯಂತಿಯನ್ನು ಆಚರಿಸಲಾಯಿತು.

Advertisement

ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಗಂಗೂಬಾಯಿ ಪವಾರ ಉದ್ಘಾಟಿಸಿ ಮಾತನಾಡಿ, ಡಾ. ಅಂಬೇಡ್ಕರರು ಸಾಮಾಜಿಕ ಸಮಾನತೆ, ಶೈಕ್ಷಣಿಕ ಪ್ರಗತಿ ಮತ್ತು ಮಾನವ ಹಕ್ಕುಗಳ ಪರಿಪೋಷಕರಾಗಿದ್ದಾರೆ. ಅವರು ನಮಗೆ ಸಂವಿಧಾನವನ್ನು ಕೊಟ್ಟ ಮಹಾನ್ ಮಾನವತಾವಾದಿ. ಅವರ ಮಾರ್ಗದರ್ಶನದಲ್ಲಿ ಸಮಾಜದ ಪ್ರತಿಯೊಬ್ಬ ಪ್ರಜೆ ಮುಂದುವರಿಯಬೇಕು ಎಂದರು.

ಪ್ರಶಿಕ್ಷಣಾರ್ಥಿ ಬಸವರಾಜ ಪ್ರಾರ್ಥನಾ ಗೀತೆಯನ್ನು ಹಾಡಿದರು. ಚಂದ್ರಪ್ಪ ಅಂಬೇಡ್ಕರ್ ಜಯಂತಿಯ ಕುರಿತು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಎಲ್ಲ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಹಾಗೂ ಎಲ್ಲಾ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.


Spread the love

LEAVE A REPLY

Please enter your comment!
Please enter your name here