ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ‘ಮಹಾ ಪರಿನಿರ್ವಾಣ ದಿನ’ದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಡಾ. ಬಿಆರ್ ಅಂಬೇಡ್ಕರ್ ಅವರು ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗು ನಿವಾರಣೆಗೆ ಮಾಡಿ ಸಮ ಸಮಾಜದಕ್ಕಾಗಿ ಶ್ರಮಿಸಿದವರು.
Advertisement
ಅವರು ನಮಗೆಲ್ಲಾ ಆದರ್ಶರಾದವರು ಎಂದರು. ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಇಂಧನ ಸಚಿವ ಕೆ.ಜೆ.ಜಾರ್ಜ್, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.