ಅಂಬಿ ಮೊಮ್ಮಗನ ನಾಮಕರಣ ಸಂಭ್ರಮ: ಅಭಿ ಮಗನಿಗೆ ಸುಮಲತಾ ಇಟ್ಟ ಹೆಸರೇನು?

0
Spread the love

ಬೆಂಗಳೂರು:– ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಹಿರಿಯ ನಟಿ ಸುಮಲತಾ ಅಂಬರೀಶ್ ಅವರ ಮೊಮ್ಮಗ, ನಟ ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಬಿದ್ದಪ್ಪ ಅವರ ಮಗನ ನಾಮಕರಣ ಅದ್ದೂರಿಯಾಗಿ ಜರುಗಿದೆ.

Advertisement

ಕಾರ್ಯಕ್ರಮದಲ್ಲಿ ಅಂಬರೀಷ್ ಕುಟುಂಬಸ್ಥರು, ಸಂಬಂಧಿಕರು, ಹಿತೈಷಿಗಳು, ರಾಜಕೀಯ ಮತ್ತು ಚಿತ್ರರಂಗದ ಹಲವರು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಅಭಿಷೇಕ್ ಅಂಬರೀಶ್ ಅವರು ತಮ್ಮ ಮಗನಿಗೆ ಅಪ್ಪನ‌ ಹೆಸರಿಟ್ಟಿದ್ದು, ರಾಣಾ ಅಮರ್ ಅಂಬರೀಶ್ ಎಂದು ನಾಮಕರಣ ಮಾಡಿದ್ದಾರೆ. ರೆಬೆಲ್ ಸ್ಟಾರ್ ಅಂಬರೀಶ್ ಅವರ ಮೂಲ ಹೆಸರು ಅಮರನಾಥ್ ಅನ್ನೋದಾಗಿತ್ತು. ಈ ಹಿನ್ನೆಲೆಯಲ್ಲಿ ಅಭಿಷೇಕ್ ಅಂಬರೀಶ್ ಅವರು ತಮ್ಮ ಮಗನಿಗೆ ರಾಣಾ ಅಮರ್ ಅಂಬರೀಶ್ ಎಂದು ಹೆಸರಿಟ್ಟಿದ್ದಾರೆ.

ಅಭಿಷೇಕ್‌ ಅಂಬರೀಶ್‌ ಪುತ್ರನ ನಾಮಕರಣ ಸಮಾರಂಭಕ್ಕೆ ಸ್ಯಾಂಡಲ್‌ವುಡ್‌ ಬಾದ್‌ಷಾ ಕಿಚ್ಚ ಸುದೀಪ್‌ ಮತ್ತು ಅವರ ಪತ್ನಿ ಪ್ರಿಯಾ ಸುದೀಪ್ ಗ್ರ್ಯಾಂಡ್‌ ಆಗಿ ಎಂಟ್ರಿ ಕೊಟ್ಟಿದ್ದರು. ಅಂಬಿ ಪುತ್ರನಿಗಾಗಿ ಕಿಚ್ಚ ಸುದೀಪ್‌ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಸುದೀಪ್‌ ತಂದ ಗಿಫ್ಟ್‌ ನೋಡಿ ಸುಮಲತಾ ಸಂತಸ ವ್ಯಕ್ತಪಡಿಸಿದ್ದಾರೆ.

ಅಭಿಷೇಕ್‌ ಪುತ್ರನ ನಾಮಕರಣ ಸಮಾರಂಭಕ್ಕೆ ಚಿತ್ರರಂಗದ ಹಲವು ಗಣ್ಯರು ಮತ್ತು ಕುಟುಂಬಸ್ಥರು ಭಾಗಿಯಾಗಿದ್ದಾರೆ. ಆದರೆ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದ, ದರ್ಶನ್‌ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here