ಗದಗ:- ಆ್ಯಂಬುಲೆನ್ಸ್-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸೇರಿ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿರುವ ಘಟನೆ ಗದಗ ನಗರದ ಬೆಟಗೇರಿ ರೈಲ್ವೇ ಅಂಡರ್ ಬ್ರಿಡ್ಜ್ ಬಳಿ ಜರುಗಿದೆ. ಅಪಘಾತದ ತೀವ್ರತೆಗೆ ಆ್ಯಂಬುಲೆನ್ಸ್ ಗಾಜು ಪುಡಿ-ಪುಡಿ ಆಗಿದೆ.
Advertisement
ಘಟನೆಯಲ್ಲಿ ಬೈಕ್ ಸವಾರ 25 ವರ್ಷದ ನಾರಾಯಣ, ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ತೀವ್ರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅಂಬುಲೆನ್ಸ ಚಾಲಕನ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಅಂಬುಲೆನ್ಸ್ ಚಾಲಕ ಕುಡಿದು ವಾಹನ ಚಲಾಯಿಸಿರುವ ಶಂಕೆ ಇದ್ದು, ರಾಂಗ್ ಸೈಡ್ ನಿಂದ ಬಂದು ಬೈಕ್ ಸವಾರಿನಿಗೆ ಡಿಕ್ಕಿ ಹೊಡೆದಿದ್ದಾನೆ. ಇನ್ನೂ ಕೂಡಲೇ ಸ್ಥಳಿಯರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಗದಗ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.