ಆ್ಯಂಬುಲೆನ್ಸ್ ಇಂಜಿನ್ ಗೆ ಹೊತ್ತಿಕೊಂಡ ಬೆಂಕಿ: ತಪ್ಪಿದ ದುರಂತ, ಗರ್ಭಿಣಿ ಪಾರು!

0
Spread the love

ಮುಂಬೈ:- ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಅಂಬುಲೆನ್ಸ್‌ನ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಜರುಗಿದೆ.

Advertisement

ಅಂಬುಲೆನ್ಸ್‌ಗೆ ಬೆಂಕಿ ಹೊತ್ತಿಕೊಂಡು ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡಿರುವ ದೃಶ್ಯ ಜನರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಭಾರೀ ಎತ್ತರಕ್ಕೆ ಚಿಮ್ಮಿದೆ. ಅಲ್ಲದೇ ಕೆಲವು ಮನೆಗಳ ಗಾಜುಗಳು ಪುಡಿಪುಡಿಯಾಗಿವೆ. ಘಟನೆಯಲ್ಲಿ ಯಾರಿಗೂ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಅಂಬುಲೆನ್ಸ್‌ನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಅವರ ಕುಟುಂಬಸ್ಥರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ಬಳಿಕ ಅಂಬುಲೆನ್ಸ್‌ನ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದೆ ಮತ್ತು ಕೆಲವೇ ನಿಮಿಷಗಳಲ್ಲಿ ವಾಹನದಲ್ಲಿದ್ದ ಆಮ್ಲಜನಕ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.


Spread the love

LEAVE A REPLY

Please enter your comment!
Please enter your name here