HomeIndia NewsPahalgam Terror Attack: ಭಯೋತ್ಪಾದನೆ ವಿರುದ್ಧ ಭಾರತದೊಂದಿಗೆ ಅಮೆರಿಕ ಬಲವಾಗಿ ನಿಂತಿದೆ: ಡೊನಾಲ್ಡ್ ಟ್ರಂಪ್

Pahalgam Terror Attack: ಭಯೋತ್ಪಾದನೆ ವಿರುದ್ಧ ಭಾರತದೊಂದಿಗೆ ಅಮೆರಿಕ ಬಲವಾಗಿ ನಿಂತಿದೆ: ಡೊನಾಲ್ಡ್ ಟ್ರಂಪ್

For Dai;y Updates Join Our whatsapp Group

Spread the love

ಅಮೆರಿಕ: ಬೇಸಿಗೆ ಪ್ರವಾಸಕ್ಕೆಂದು ಕಣಿವೆ ರಾಜ್ಯ ಕಾಶ್ಮೀರಕ್ಕೆ ತೆರಳಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ಮಂಗಳವಾರ ಭೀಕರ ನರಮೇಧ ನಡೆಸಿದ್ದಾರೆ. ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್‌ ಹಲ್ಲುಗಾವಲು ಪ್ರದೇಶದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಜನರು ಸಾವನ್ನಪ್ಪಿದ್ದಾರೆ.

ಇನ್ನೂ ಈ ಘಟನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತದೊಂದಿಗೆ ಒಗ್ಗಟ್ಟಿನ ಸಂದೇಶವನ್ನು ಕಳುಹಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದೊಂದಿಗೆ ಭಯೋತ್ಪಾದನೆಯ ವಿರುದ್ಧ ನಾವು ಗಟ್ಟಿಯಾಗಿ ನಿಲ್ಲುತ್ತೇವೆ ಎಂದು ಒತ್ತಿ ಹೇಳಿದ್ದಾರೆ.  “ಕಾಶ್ಮೀರದಲ್ಲಿ ನಡೆದ ಘಟನೆ ತೀವ್ರ ಆತಂಕಕಾರಿ ಸುದ್ದಿಯಾಗಿದೆ. ಭಯೋತ್ಪಾದನೆಯ ವಿರುದ್ಧ ಅಮೆರಿಕ ಭಾರತದೊಂದಿಗೆ ಬಲವಾಗಿ ನಿಂತಿದೆ.

ಮೃತಪಟ್ಟವರ ಆತ್ಮಗಳಿಗೆ ಮತ್ತು ಗಾಯಗೊಂಡವರ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ. ಪ್ರಧಾನಿ ಮೋದಿ ಮತ್ತು ಭಾರತದ ಪ್ರೀತಿಯ ಜನರಿಗೆ ನಮ್ಮ ಸಂಪೂರ್ಣ ಬೆಂಬಲ ಮತ್ತು ಸಹಾನುಭೂತಿ ಇದೆ. ನಾವು ನಿಮ್ಮೊಂದಿಗೆ ಇದ್ದೇವೆ!” ಎಂದು ಡೊನಾಲ್ಡ್ ಟ್ರಂಪ್ ಟ್ರೂತ್ ಸೋಷಿಯಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

 

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!