ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ: ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ!

0
Spread the love

ನವದೆಹಲಿ:- ಸ್ವಾತಂತ್ರ್ಯ ದಿನಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಮನೆಯ ಮೇಲೆ ಧ್ವಜಾರೋಹಣ ಮಾಡುವ ಮೂಲಕ ಹರ್ ಘರ್ ತಿರಂಗ ಅಭಿಯಾನಕ್ಕೆ ಇಂದು ಕೇಂದ್ರ ಸಚಿವ ಅಮಿತ್ ಶಾ ಚಾಲನೆ ಕೊಟ್ಟಿದ್ದಾರೆ.

Advertisement

ಪತ್ನಿ ಸೋನಲ್ ಶಾ ಅವರೊಂದಿಗೆ ದೆಹಲಿಯ ಕೃಷ್ಣ ಮೆನನ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಅಮಿತ್‌ ಶಾ ತ್ರಿವರ್ಣ ಧ್ವಜ ಹಾರಿಸಿದ್ದಾರೆ. ಟೆರೇಸ್‌ನಲ್ಲಿ ತಿರಂಗ ಹಾರಿಸುತ್ತಿರುವ ವೀಡಿಯೋ ವೈರಲ್‌ ಆಗಿದೆ. ಆಜಾದಿ ಕಾ ಅಮೃತ್ ಮಹೋತ್ಸವದ ಆಶ್ರಯದಲ್ಲಿ ಪ್ರಾರಂಭಿಸಲಾದ ಹರ್ ಘರ್ ತಿರಂಗ ಅಭಿಯಾನದ 4 ನೇ ಆವೃತ್ತಿಯನ್ನು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಘೋಷಿಸಿತು. ದೇಶಾದ್ಯಂತ ನಾಗರಿಕರು ಭಾರತೀಯ ರಾಷ್ಟ್ರೀಯ ಧ್ವಜವಾದ ತಿರಂಗವನ್ನು ಮನೆ ಮೇಲೆ ಹಾರಿಸುವಂತೆ ಪ್ರೇರೇಪಿಸಿತ್ತು.

ದೇಶಾದ್ಯಂತ ನಡೆಸಲಾದ ಈ ಅಭಿಯಾನವು ಜನಾಂದೋಲನವಾಗಿ ಮಾರ್ಪಟ್ಟಿದೆ. ಅಭಿಯಾನದ ನಾಲ್ಕನೇ ವರ್ಷದಲ್ಲಿ 5 ಲಕ್ಷಕ್ಕೂ ಹೆಚ್ಚು ಮಂದಿ ನೋಂದಾಯಿಸಿಕೊಂಡಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.


Spread the love

LEAVE A REPLY

Please enter your comment!
Please enter your name here