ಅಮಿತ್‌ ಶಾ ತಲೆ ಕತ್ತರಿಸಿ, ಟೇಬಲ್‌ ಮೇಲೆ ಪ್ರದರ್ಶನಕ್ಕೆ ಇಡಬೇಕು: ನಾಲಿಗೆ ಹರಿಬಿಟ್ಟ ‘ಕೈ’ ಸಂಸದೆ

0
Spread the love

ಕೋಲ್ಕತ್ತಾ:- ಅಮಿತ್‌ ಶಾ ತಲೆ ಕತ್ತರಿಸಿ, ಟೇಬಲ್‌ ಮೇಲೆ ಪ್ರದರ್ಶನಕ್ಕೆ ಇಡಬೇಕು ಎಂದು ಹೇಳುವ ಮೂಲಕ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ನಾಲಿಗೆ ಹರಿಬಿಟ್ಟಿದ್ದಾರೆ.

Advertisement

ಭಾರತಕ್ಕೆ ಬಾಂಗ್ಲಾ ಪ್ರದೇಶಗಳ ಒಳನುಸುಳುವಿಕೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಹುವಾ ಮೊಯಿತ್ರಾ, ಒಂದು ವೇಳೆ ಭಾರತದ ಗಡಿಯನ್ನ ರಕ್ಷಣೆ ಮಾಡಲು ಸಾಧ್ಯವಾಗದಿದ್ರೆ, ನೂರಾರು ಸಂಖ್ಯೆಯಲ್ಲಿ ನುಸುಳುಕೋರರು ಒಳನುಸುಳುತ್ತಿದ್ದರೆ, ನಮ್ಮ ಮಹಿಳೆಯರನ್ನ ಅಗೌರವಿಸುತ್ತಿದ್ದರೆ ಅಥವಾ ನಮ್ಮ ಭೂಮಿಯನ್ನ ಅತಿಕ್ರಮಿಸಿಕೊಳ್ಳುತ್ತಿದ್ದರೆ? ಅಮಿತ್‌ ಶಾ ಅವರ ತಲೆ ಕತ್ತರಿಸಿ ಟೇಬಲ್‌ ಮೇಲೆ ಪ್ರದರ್ಶನಕ್ಕಿಡುವುದು ನಿಮ್ಮ ಕರ್ತವ್ಯ. ಏಕೆಂದರೆ ಗಡಿ ಕಾಯಲು, ನುಸುಳುವಿಕೆ ತಡೆಯಲು ಅಮಿತ್ ಶಾ ವಿಫಲರಾಗಿದ್ದಾರೆ ಎಂದು ಲೇವಡಿ ಮಾಡಿದರು.

ಸ್ವಾತಂತ್ರ್ಯ ದಿನಾಚರಣೆ ವೇಳೆ ಪ್ರಧಾನಿ ಮೋದಿಯ ಕೆಂಪುಕೋಟೆ ಭಾಷಣ ಉಲ್ಲೇಖಿಸಿದ ಮಹುವಾ, ʻಮೋದಿ ಕೆಂಪು ಕೋಟೆಯಲ್ಲಿ ನಿಂತು ನುಸುಳುಕೋರರು ಜನಸಂಖ್ಯಾ ಬದಲಾವಣೆ ಮಾಡುತ್ತಿದ್ದಾರೆ ಅಂತ ಹೇಳುತ್ತಿದ್ದರು. ಇದನ್ನ ಗಂಭೀರವಾಗಿ ಪರಿಗಣಿಸದೇ ಗೃಹಸಚಿವರು ಮುಂದಿನ ಸಾಲಿನಲ್ಲಿ ನಿಂತು ಚಪ್ಪಾಳೆ ತಟ್ಟುತ್ತಿದ್ದರು. ಗಡಿಯಲ್ಲಿ ಭದ್ರತಾ ಪಡೆಗಳಿದ್ದೂ ಒಳನುಸುಳುವಿಕೆ ಏಕೆ ಮುಂದುವರಿಯುತ್ತಿದೆ? ಅದರಲ್ಲೂ ಪಶ್ಚಿಮ ಬಂಗಾಳದ ಗಡಿಯಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇದನ್ನ ತಡೆಯುವಲ್ಲಿ ಶಾ ವಿಫಲರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.


Spread the love

LEAVE A REPLY

Please enter your comment!
Please enter your name here