ಬೆಳಗಾವಿ: ಡಾ. ಬಿ ಆರ್ ಅಂಬೇಡ್ಕರ್ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ವರು ಸಂಸತ್‌ನಲ್ಲಿ ನೀಡಿದ ಹೇಳಿಕೆ ವಿರೋಧಿಸಿ ವಿಧಾನಸಭೆಯಲ್ಲಿ ಪ್ರಸ್ತಾಪಿಸಿ ಆಡಳಿತ ಪಕ್ಷದ ಶಾಸಕರೇ ಪ್ರತಿಭಟನೆ ನಡೆಸಿದ್ದರಿಂದ ಕೆಲ ಕಾಲ ಕಲಾಪ ಮುಂದೂಡಬೇಕಾದ ಪ್ರಸಂಗ ನಡೆಯಿತು. ಸದನ ಮುಂದೂಡಿಕೆಯಾದ ನಂತರವೂ ಪ್ರತಿಭಟನೆ ಮುಂದುವರೆದಿತ್ತು.
ಕಾಂಗ್ರೆಸ್‌ನ ಎಲ್ಲಾ ಶಾಸಕರು ಇದಕ್ಕೆ ಬೆಂಬಲ ವ್ಯಕ್ತ ಪಡಿಸಿದರು. ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ತಮ ಸ್ಥಾನದಿಂದಲೇ ಪ್ರದರ್ಶನ ಮಾಡಿ ಪ್ರತಿಭಟನೆ ವ್ಯಕ್ತ ಪಡಿಸಿದರು. ಜೈ ಭೀಮ್ ಘೋಷಣೆಗಳನ್ನು ಕೂಗಿದರು.
ನಂತರ ಸದನದ ಒಳಗೆ ಯಾವುದೇ ಭಿತ್ತಿಪತ್ತ ಹಾಗೂ ಭಾವಚಿತ್ರಗಳನ್ನು ಪ್ರದರ್ಶನ ಮಾಡುವಂತಿಲ್ಲ ಎಂದು ಸ್ಪೀಕರ್ ಖಾದರ್ ತಿಳಿ ಹೇಳಿದರೂ, ಇದಕ್ಕೆ ಕಿವಿಗೊಡದ ಕಾಂಗ್ರೆಸ್ ಶಾಸಕರು ಪ್ರತಿಭಟನೆ ಮುಂದುವರೆಸಿದರು. ಈ ಸಂದರ್ಭದಲ್ಲಿ ಗೊಂದಲದ ವಾತಾವರಣ ಮುಂದುವರೆದಾಗ ಸ್ಪೀಕರ್ ಅವರು ಕಲಾಪವನ್ನು ಹತ್ತು ನಿಮಿಷಗಳ ಕಾಲ ಮುಂದೂಡಿದರು.