ಕರುನಾಡಿಗೆ ಕೊರೋನಾ ಆತಂಕ: 11 ತಿಂಗಳ ಮಗುವಿಗೆ ಸೋಂಕು ಧೃಡ.. ಮಂಡ್ಯದಲ್ಲಿ ಮೊದಲ ಸೋಂಕು ಪತ್ತೆ!

0
Spread the love

ಬೆಂಗಳೂರು/ಮಂಡ್ಯ/ಹುಬ್ಬಳ್ಳಿ:- ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

Advertisement

ಅದರಂತೆ ಹುಬ್ಬಳ್ಳಿಯ ಬೈರಿದೇವರಕೊಪ್ಪ ಗ್ರಾಮದ 11 ತಿಂಗಳ ಮಗುವಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಗುವಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಹೋದಾಗ ಕೋವಿಡ್‌ ಇರೋದು ಪತ್ತೆಯಾಗಿದೆ. ಸದ್ಯ ಮಗುವಿನ ಆರೋಗ್ಯ ಸ್ಥಿರವಾಗಿದೆ ಅಂತ ಧಾರವಾಡ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಮಂಡ್ಯದಲ್ಲಿ ಮೊದಲ ಸೋಂಕು ಪತ್ತೆ!

ಇನ್ನೂ ಈ ವರ್ಷ ಮಂಡ್ಯದಲ್ಲಿ 60 ವರ್ಷದ ವೃದ್ಧೆಯಲ್ಲಿ ಮೊದಲ ಕೊರೊನಾ ಕೇಸ್‌ ಪತ್ತೆಯಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಹರಕೆರೆ ಗ್ರಾಮದ ಕಲ್ಯಾಣಮ್ಮ ಎಂಬ ವೃದ್ಧೆಗೆ ಸೋಂಕು ಕಾಣಿಸಿಕೊಂಡಿದೆ. ಗ್ರಾಮದ ನಿವಾಸದಲ್ಲೇ ಇದ್ದ ಕಲ್ಯಾಣಮ್ಮ, ಕಳೆದ 2 ದಿನಗಳಿಂದ ಜ್ವರ, ನೆಗಡಿ, ಕೆಮ್ಮಿನಿಂದ ಬಳಲುತ್ತಿದ್ದರು. ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದು, ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here