ಮೈಸೂರು: 11 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಜಲಪುರಿ ವಸತಿ ಗೃಹದಲ್ಲಿ ನಡೆದಿದೆ. ಕುಶಾಲ್ (11) ವರ್ಷ ಮೃತ ಬಾಲಕನಾಗಿದ್ದು, ತಂದೆ ದೇಸಿಗೌಡ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದು, ತಾಯಿ ಲಕ್ಷ್ಮಿ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಯಿ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ತಕ್ಷಣ ಕುಣಿಕೆಯಿಂದ ಇಳಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಬಾಲಕ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ನಜರ್‌ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



