ಹಾಸನ:- ಜಿಲ್ಲೆ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ಬಾಲಕನೋರ್ವ ಹೃದಯಾಘಾತಕ್ಕೆ ಬಲಿಯಾದ ಘಟನೆ ಜರುಗಿದೆ.
Advertisement
11 ವರ್ಷ ವಯಸ್ಸಿನ ಸಚಿನ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಸಚಿನ್ ಗ್ರಾಮದ ಕಾವ್ಯಶ್ರೀ ಎಂಬುವವರ ಮಗ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ. ನಿನ್ನೆ ಇದ್ದಕ್ಕಿದ್ದಂತೆ ಸಚಿನ್‌ಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಗೆ ಹೋಗದೆ ಮನೆಯಲ್ಲಿ ಟಿವಿ ನೋಡುತ್ತಿದ್ದನು. ಈ ವೇಳೆ ಏಕಾಏಕಿ ಸಚಿನ್‌ಗೆ ಎದೆನೋವು ಕಾಣಿಸಿಕೊಂಡಿದೆ. ಇದ್ದಲ್ಲಿಯೇ ಕೊನೆಯುಸಿರೆಳೆದಿದ್ದಾನೆ.
ಸ್ವಲ್ಪ ಸಮಯದ ನಂತರ ಸಚಿನ್‌ನನ್ನು ಮಾತನಾಡಿಸಲು ಮನೆಯವರು ಬಂದಿದ್ದಾರೆ. ಆದರೆ ಸಚಿನ್ ಮಾತನಾಡದೆ ಇರುವುದನ್ನ ಗಮನಿಸಿ ತಕ್ಷಣವೇ ಆಲೂರು ಸರ್ಕಾರಿ ಆಸ್ಪತ್ರೆಗೆ ಪೋಷಕರು ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಪರಿಶೀಲಿಸಿದ ಬಾಲಕ ಮೃತಪಟ್ಟಿರುವುದನ್ನು ದೃಢ ಪಡಿಸಿದರು.