ಹುಬ್ಬಳ್ಳಿ :- ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಜರುಗಿದೆ.
11 ವರ್ಷದ ಅಮೃತ ಶಿವಪುರ ಮೃತ ಬಾಲಕಿ. ಎಳ್ಳ ಅಮವಾಸ್ಯೆ ಹಿನ್ನೆಲೆ ಕುಟುಂಬಸ್ಥರು ಸೇರಿ ಜಮೀನಿಗೆ ತೆರಳಿದ್ದ ವೇಳೆ ಶಿವಲಿಂಗಯ್ಯ ಎಂಬುವರಿಗೆ ಸೇರಿದ ಕೃಷಿ ಹೊಂಡದಲ್ಲಿ ಈ ಅವಘಡ ಸಂಭವಿಸಿದೆ.
ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಮಕ್ಕಳು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಹೊಂಡಕ್ಕೆ ಬಿದ್ದ ಮೂರು ಮಕ್ಕಳನ್ನು ರಕ್ಷಿಸಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಓರ್ವ ಬಾಲಕಿ ಮೃತಪಟ್ಟಿದ್ದಾಳೆ.



