ಮನುಕುಲವೇ ತಲೆತಗ್ಗಿಸೋ ಕೃತ್ಯ: ಹಕ್ಕಿಪಿಕ್ಕಿ ಕಾಲೋನಿಯ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ!

0
Spread the love

ರಾಮನಗರ:- ಮನುಕುಲವೇ ತಲೆತಗ್ಗಿಸೋ ಕೃತ್ಯ ಒಂದು ರಾಮನಗರದಲ್ಲಿ ಬೆಳಕಿಗೆ ಬಂದಿದೆ. ಹಕ್ಕಿಪಿಕ್ಕಿ ಕಾಲೋನಿಯ ವಿಕಲಚೇತನ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಭದ್ರಾಪುರ ಗ್ರಾಮ ಸಮೀಪದ ರೈಲು ಹಳಿ ಪಕ್ಕದಲ್ಲಿ ಈ ಘಟನೆ ಜರುಗಿದೆ. ಖುಷಿ ಕೊಲೆಯಾದ ಬಾಲಕಿ.

Advertisement

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಇನ್ನು, ಖುಷಿ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಕುಟುಂಬಸ್ಥರು ಶಂಕೆ ವ್ಯಕ್ಯಪಡಿಸಿದ ಹಿನ್ನೆಲೆಯಲ್ಲಿ ಪೊಲೀಸರು ಕೆಲ ಸಾಕ್ಷ್ಯಗಳನ್ನ ಎಫ್ಎಸ್​ಎಲ್​ಗೆ ಕಳುಹಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಅಲ್ಲದೆ, ಕೆಲವು ಸಂಶಯಾಸ್ಪದ ವ್ಯಕ್ತಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಕಲಚೇತನ ಬಾಲಕಿ ಖುಷಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಘಟನೆಯನ್ನು ಖಂಡಿಸಿ ರಾಮನಗರದಲ್ಲಿ ಭದ್ರಾಪುರ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿ ಆರೋಪಿಗಳನ್ನ ಶೀಘ್ರ ಬಂಧಿಸಿ ಗಲ್ಲಿಗೇರಿಸುವಂತೆ ಒತ್ತಾಯಿಸಿದರು. ಈ ಹಿನ್ನೆಲೆಯಲ್ಲಿ ರಾಜ್ಯ ಎಸ್ಸಿ-ಎಸ್ಟಿ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಗ್ರಾಮಕ್ಕೆ ಹಾಗೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ಸರ್ಕಾರದಿಂದ ನ್ಯಾಯಕೊಡಿಸುವ ಭರವಸೆ ನೀಡಿದರು.


Spread the love

LEAVE A REPLY

Please enter your comment!
Please enter your name here