ಕ್ರಿಯಾಶೀಲ ಬದುಕು ಜೀವನದ ಶ್ರೇಯಸ್ಸಿಗೆ ಅಡಿಪಾಯವೆಂದು: ರಂಭಾಪುರಿ ಶ್ರೀ

0
Spread the love

ವಿಜಯಸಾಕ್ಷಿ ಸುದ್ದಿ, ತರೀಕೆರೆ: ಮಾನವ ಜೀವನ ನಿಂತ ನೀರಾಗಬಾರದು. ಸದಾ ಹರಿಯುವ ಪವಿತ್ರ ಗಂಗಾಜಲವಾಗಬೇಕು. ಕಷ್ಟದ ಜೀವನ ಶಿಸ್ತನ್ನು ಕಲಿಸುವ ಪಾಠಶಾಲೆ. ಕ್ರಿಯಾಶೀಲ ಬದುಕು ಜೀವನದ ಶ್ರೇಯಸ್ಸಿಗೆ ಅಡಿಪಾಯವೆಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

Advertisement

ಅವರು ಶುಕ್ರÀವಾರ ತಾಲೂಕಿನ ಹುಣಸಘಟ್ಟ ಹಾಲುಸ್ವಾಮಿ ಮಠದಲ್ಲಿ ಕಾರ್ತೀಕ ದೀಪೋತ್ಸವ ಹಾಗೂ ಗುರುಮೂರ್ತಿ ಶಿವಾಚಾರ್ಯರ 62ನೇ ಜನ್ಮ ದಿನೋತ್ಸವದ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಬದುಕಿಗೆ ಭಗವಂತ ಕೊಟ್ಟ ಕೊಡುಗೆ ಅಪಾರ. ಸಾರ್ಥಕ ಬದುಕಿಗೆ ಧರ್ಮಾಚರಣೆಯ ಮೌಲ್ಯಗಳು ಅವಶ್ಯಕ. ಧರ್ಮದ ದಿಕ್ಸೂಚಿ ಇಲ್ಲದೆ ಇದ್ದರೆ ಜೀವನ ಬೆಳೆಯಲಾಗದು. ಧರ್ಮ ಅರ್ಥ ಕಾಮ ಮೋಕ್ಷ ಇವುಗಳಲ್ಲಿ ಒಂದನ್ನಾದರೂ ಸಾಧಿಸದಿದ್ದಲ್ಲಿ ಜೀವನ ಸಾರ್ಥಕಗೊಳ್ಳುವುದಿಲ್ಲ. ಶ್ರೀ ಜಗದ್ಗುರು ರೇಣುಕಾಚಾರ್ಯರು ಮಾನವ ಜೀವನ ವಿಕಾಸಕ್ಕಾಗಿ ನಿರೂಪಿಸಿದ ಅಹಿಂಸಾ, ಸತ್ಯ, ಅಸ್ತೇಯ ಬ್ರಹ್ಮಚರ್ಯ, ದಯಾ, ಕ್ಷಮಾ, ದಾನ, ಪೂಜಾ, ಜಪ ಮತ್ತು ಧ್ಯಾನ ಎಂಬ ದಶವಿಧ ಸೂತ್ರಗಳ ಪರಿಪಾಲನೆ ಬಹಳಷ್ಟು ಮುಖ್ಯ.

ಬಾಳಿಗೆ ಬೆಳಕು ಬೇಕು. ಬೆಳಕಿಲ್ಲದಿದ್ದರೆ ಬಾಳಲ್ಲಿ ಕತ್ತಲು ಆವರಿಸುತ್ತದೆ. ಹೊರಗಿನ ಕತ್ತಲೆಯನ್ನು ದೀಪದಿಂದ ಕಳೆಯಬಹುದು. ಒಳಗಿರುವ ಅಜ್ಞಾನ ಅನ್ನುವ ಕತ್ತಲೆಯನ್ನು ಕಳೆಯಲು ಗುರು ಮಾತ್ರ ಸಮರ್ಥನಾಗಿದ್ದಾನೆ. ಹಾಲುಸ್ವಾಮಿ ಮಠದ ಗುರುಮೂರ್ತಿ ಶಿವಾಚಾರ್ಯ ಸ್ವಾಮಿಗಳು ೬೨ನೇ ವರ್ಷದಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಶ್ರೀಗಳವರ ಚಲನಶೀಲ ವ್ಯಕ್ತಿತ್ವ ಮಠದ ಅಭಿವೃದ್ಧಿಗೆ ಸಹಕಾರಿಯಾಗಿದೆ. ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಭಕ್ತ ಸಂಕುಲದ ಪ್ರೀತ್ಯಾದರಗಳಿಗೆ ಪಾತ್ರರಾಗಿದ್ದಾರೆ ಎಂದು ಹರುಷ ವ್ಯಕ್ತಪಡಿಸಿದರು.

ನೇತೃತ್ವ ವಹಿಸಿದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ, ಜೀವನ ಮೌಲ್ಯಗಳನ್ನು ಸಂರಕ್ಷಿಸಿಕೊAಡು ಬರುವ ಜವಾಬ್ದಾರಿ ಎಲ್ಲರ ಮೇಲೂ ಇದೆ. ಧಾರ್ಮಿಕ ಮೌಲ್ಯಗಳನ್ನು ನಿರ್ಲಕ್ಷ ಮಾಡುವ ಕಾರಣ ಜನ ಸಮುದಾಯದಲ್ಲಿ ಹಲವಾರು ಸಮಸ್ಯೆಗಳು ತಲೆದೋರುತ್ತಿವೆ. ಗುರುಮೂರ್ತಿ ಶ್ರೀಗಳು ಶಿವಾಚಾರ್ಯ ಸಂಕುಲದಲ್ಲಿ ತನ್ನದೇ ಆದ ಸ್ಥಾನವನ್ನು ಹೊಂದಿ ಭಕ್ತರ ಬಾಳಿಗೆ ಬೆಳಕು ತೋರಿದ್ದಾರೆ. ಭಗವಂತ ಅವರಿಗೆ ಆರೋಗ್ಯ ಭಾಗ್ಯ ಕರುಣಿಸಲೆಂದರು.

ಈ ಪವಿತ್ರ ಸಮಾರಂಭದಲ್ಲಿ ಹುಲಿಕೆರೆ ದೊಡ್ಡಮಠದ ವಿರೂಪಾಕ್ಷಲಿಂಗ ಶ್ರೀಗಳು, ಹಣ್ಣೆ ಮಠದ ಮರುಳಸಿದ್ಧ ಪಂಡಿತಾರಾಧ್ಯ ಶ್ರೀಗಳು, ನಂದಿಪುರ ನಂದೀಶ್ವರ ಶ್ರೀಗಳು, ಬೀರೂರಿನ ರುದ್ರಮುನಿ ಶ್ರೀಗಳು, ಶಂಕರದೇವರ ಮಠದ ಚಂದ್ರಶೇಖರ ಶ್ರೀಗಳು, ಬಿಳಕಿ ಹಿರೇಮಠದ ರಾಚೋಟೇಶ್ವರ ಶ್ರೀಗಳು, ಕೆ.ಬಿದರೆ ದೊಡ್ಡಮಠದ ಪ್ರಭುಕುಮಾರ ಶ್ರೀಗಳು, ತಾವರೆಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶ್ರೀಗಳು, ಹಾರನಹಳ್ಳಿ ಶಿವಯೋಗಿ ಶ್ರೀಗಳು ಪಾಲ್ಗೊಂಡು ನುಡಿ ನಮನ ಸಲ್ಲಿಸಿದರು.


Spread the love

LEAVE A REPLY

Please enter your comment!
Please enter your name here