ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಪಟ್ಟಣದ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸುವುದು ಹಾಗೂ ಶುದ್ಧ ಕುಡಿಯುವ ನೀರಿನ ಸೌಕರ್ಯವನ್ನು ಒದಗಿಸಬೇಕೆಂದು ಶನಿವಾರ ಕರ್ನಾಟಕ ಪ್ರಜಾಪರ ವೇದಿಕೆ ವತಿಯಿಂದ ವಾಕರಸಾ ಸಂಸ್ಥೆಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾಧ್ಯಕ್ಷ ಹಸನ ತಹಸೀಲ್ದಾರ, ಶಿರಹಟ್ಟಿ ಪಟ್ಟಣಕ್ಕೆ ಪ್ರತಿದಿನ ಗ್ರಾಮೀಣ ಪ್ರದೇಶದಿಂದ ರೈತರು, ವ್ಯಾಪಾರಿಗಳು, ನೌಕರರು, ಸಾರ್ವಜನಿಕರು ವಿವಿಧ ಕಾರ್ಯಗಳ ನಿಮಿತ್ತ, ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಆಗಮಿಸುತ್ತಾರೆ. ಹೀಗಾಗಿ ನಿತ್ಯವೂ ಬಸ್ ನಿಲ್ದಾಣ ಜನದಟ್ಟಣೆಯಿಂದ ಕೂಡಿರುತ್ತದೆ.
ಪ್ರಯಾಣಿಕರ ಹಾಗೂ ಮಹಿಳೆಯರ ಹಿತದೃಷ್ಟಿಯಿಂದ ಸಿಸಿ ಕ್ಯಾಮರಾ ಅಳವಡಿಸಬೇಕು. ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಅಕ್ಕಪಕ್ಕದ ಅಂಗಡಿಗಳಲ್ಲಿಯ ಅಶುದ್ಧ ನೀರು ಸೇವನೆ ಮಾಡುತ್ತಿದ್ದಾರೆ. ಕೂಡಲೇ ನಿಲ್ದಾಣದಲ್ಲಿ ಶುದ್ಧ ನೀರಿನ ಘಟಕ ಪ್ರಾರಂಭಿಸಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶರೀಫ ಗುಡಿಮನಿ, ಭರಮಪ್ಪ ಎಚ್, ಸಾಧಿಕ ಮುಳಗುಂದ, ಕಳಕಪ್ಪ ಬಿಸನಹಳ್ಳಿ ಉಪಸ್ಥಿತರಿದ್ದರು.