ವಿಜಯಸಾಕ್ಷಿ ಸುದ್ದಿ, ಗದಗ : ಅಧಿಕಾರಕ್ಕೆ ಬಂದ ಕೇವಲ ಹತ್ತು ತಿಂಗಳೊಳಗೆ ಭರವಸೆ ನೀಡಿದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಿದ್ದು ಕಾಂಗ್ರೆಸ್ ಸರ್ಕಾರ. ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ 25 ಗ್ಯಾರಂಟಿಗಳನ್ನು ನೀಡಲಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಬಂದ ಕ್ಷಣವೇ ಕೊಟ್ಟ ಮಾತಿನಂತೆ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮನವಿ ಮಾಡಿದರು.
ಗದಗ ಜಿಲ್ಲೆಯ ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರ, ಬಾಲೆಹೊಸೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಚುನಾವಣಾ ಪ್ರಚಾರ ಸಭೆ ಹಾಗೂ ರೋಡ್‌ಶೋ ನಡೆಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಮುಂಡರಗಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ಪೂಜ್ಯ ಶ್ರೀಗಳ ಆಶೀರ್ವಾದ ಪಡೆದರು. ಮಾಜಿ ಶಾಸಕರು ರಾಮಕೃಷ್ಣ ದೊಡ್ಮನಿ, ಸುಜಾತಾ ದೊಡ್ಮನಿ ಸೇರಿದಂತೆ ಕಾರ್ಯಕರ್ತರು ಇದ್ದರು.