ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆಗೈದ ಹೆಂಡ್ತಿ!

0
Spread the love

ಹಾವೇರಿ: ಹಾವೇರಿಯ ರಟ್ಟಿಹಳ್ಳಿ ತಾಲೂಕಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆ ಪ್ರಿಯಕರ ಜೊತೆ ಸೇರಿ ಪತಿಯನ್ನೇ ಪತ್ನಿ ಕೆರೆಗೆ ತಳ್ಳಿ ಕೊಲೆ ಮಾಡಿರುವ ಘಟನೆ ಜರುಗಿದೆ.

Advertisement

38 ವರ್ಷದ ಶಫಿವುಲ್ಲಾ ಅಬ್ದುಲ್ ಮಹೀಬ್ ಕೊಲೆಯಾದ ಪತಿ. ಈತ ಹರಿಹರ ಮೂಲದವರು. ಪತ್ನಿ ಶಹೀನಾಬಾನು ಹಾಗೂ ಆಕೆಯ ಪ್ರಿಯಕರ ಮುಬಾರಕ್ ಖಲಂದರಸಾಬ್‌ನನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಮುಬಾರಕ್ ಖಲಂದರಸಾಬ್ ಮತ್ತು ಶಹೀನಾಬಾನು ಮಧ್ಯೆ ಅನೈತಿಕ ಸಂಬಂಧ ಇತ್ತು. ಮುಬಾರಕ್ ಖಲಂದರಸಾಬ್‌ನನ್ನು ಮದುವೆ ಆಗುವಂತೆ ಶಹೀನಾಬಾನು ಪೀಡಿಸುತ್ತಿದ್ದಳು. ನಮ್ಮಿಬ್ಬರ ಮದುವೆಗೆ ನಿನ್ನ ಪತಿ ಅಡ್ಡಿಯಾಗ್ತಾನೆ ಎಂದು ಹೇಳಿದ್ದ. ಹೀಗಾಗಿ ಇಬ್ಬರೂ ಸೇರಿ ಶಫೀವುಲ್ಲಾ ಕೊಲೆಗೆ ಸಂಚು ರೂಪಿಸಿದ್ದರು. ಬಳಿಕ ಮುಬಾರಕ್ ಖಲಂದರಸಾಬ್, ಶಫೀವುಲ್ಲಾ ಜೊತೆ ಗೆಳೆತನ ಬೆಳಸಿ ಮನೆಗೆ ಬಂದು ಹೋಗಿ ಮಾಡುತ್ತಿದ್ದ. ಜು. 27ರಂದು ಕೆರೆ ನೋಡಲು ಹೋಗೋಣ ಎಂದು ಪುಸಲಾಯಿಸಿ ಶಫೀವುಲ್ಲಾನನ್ನು ಕೆರೆ ಕಡೆ ಕರೆದುಕೊಂಡು ಹೋಗಿದ್ದ.

ಮದಗಮಾಸೂರು ಕೆರೆ ಬಳಿ ಎಣ್ಣೆ ಪಾರ್ಟಿ ಮಾಡಿ, ಬಳಿಕ ಶಫೀವುಲ್ಲಾನನ್ನು ಕೆರೆಗೆ ತಳ್ಳಿದರು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಬಿಂಬಿಸಿದ್ದರು. ಮೃತದೇಹ ಪತ್ತೆಯಾದ ಬಳಿಕ, ದೇಹದಲ್ಲಿ ಗಾಯಗಳಿರುವುದು ಕಂಡು ಅನುಮಾನ ಮೂಡಿತ್ತು. ಪೊಲೀಸರು ಇಬ್ಬರನ್ನೂ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಗಳು ಕೊಲೆ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here