ಬೆಂಗಳೂರು: ಸಿಲಿಕಾನ್ ಸಿಟ ಬೆಂಗಳೂರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಗನ್ ಹಿಡಿದು ಪಬ್ʼಗೆ ಎಂಟ್ರಿ ಕೊಟ್ಟ ಘಟನೆ ನಡೆದಿದೆ. ಪಬ್ನಲ್ಲಿ ಆತ ಅವಿತುಕೊಂಡಿದ್ದು, ಆತನನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾಗಿದ್ದಾರೆ.
Advertisement
ಪಿಸ್ತೂಲ್ ಇರುವುದರಿಂದ ಈ ಪ್ರಕರಣವನ್ನು ತುಂಬಾ ಸೂಕ್ಷ್ಮವಾಗಿ ತೆಗೆದುಕೊಳ್ಳಬೇಕಿದೆ. ಘಟನಾ ಸ್ಥಳದಲ್ಲಿ ಡ್ರೋನ್ ಹಾರಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕಳ್ಳತನಕ್ಕೆ ಬಂದಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ಆಗಮಿಸಿದ್ದಾರೆ. ಸುಬ್ರಹ್ಮಣ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ನಡೆದಿದೆ. ಪೊಲೀಸ್, ಬಾಂಬ್ ಸ್ಕ್ವಾಡ್ ಸ್ಥಳದಲ್ಲಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.