ಮಂಡ್ಯ: ಅಪರಿಚಿತ ಯುವಕ ಕಾವೇರಿ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ ಹೌದು ಮಂಡ್ಯ ಜಿಲ್ಲೆಯ ಮುತ್ತತ್ತಿಯ ಕಾವೇರಿ ನದಿಯಲ್ಲಿ ನೋಡ ನೋಡ್ತಿದ್ದಂತೆ ವ್ಯಕ್ತಿ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆ ಆಗಿದೆ. ಸ್ಥಳಕ್ಕೆ ಹಲಗೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಕಬಿನಿ ಹಾಗೂ ಕೆಆರ್‌ಎಸ್ ಜಲಾಶಯದಿಂದ ಅಧಿಕ ಪ್ರಮಾಣದ ನೀರನ್ನ ನದಿಗೆ ಬಿಡಲಾಗಿದ್ದು,
ಹೊಗೆನಕಲ್ ಫಾಲ್ಸ್ ಧುಮ್ಮುಕುತ್ತಿದೆ. ಹೊಗೆನಕಲ್ ಜಲಪಾತದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕರ್ನಾಟಕ ಸೇರಿದಂತೆ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಉಕ್ಕಿ ಹರಿಯುತ್ತಿದೆ. ನಾರಾಯಣಪುರ ಡ್ಯಾಂನಿಂದ ಕೃಷ್ಣಾ ನದಿಗೆ ಒಂದು ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿಸಲಾಗ್ತಿದೆ. ನಾರಾಯಣ ಜಲಾಶಯಕ್ಕೆ 91,263 ಕ್ಯೂಸೆಕ್ ನೀರು ಒಳಹರಿವಿದ್ದು, ಕ್ಷಣಕ್ಷಣಕ್ಕೂ ಡ್ಯಾಂನ ನೀರಿನ ಮಟ್ಟ ಹೆಚ್ಚಾಗುತ್ತಿದೆ.