ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಕೊನೆಗೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ 10:56ರ ಶುಭ ಮೂಹೂರ್ತದಲ್ಲಿ ಸಪ್ತಪದಿ ತುಳಿದಿದ್ದಾರೆ. ಬೆಂಗಳೂರಿನ ಹೊರವಲಯದ ಕಗ್ಗಲಿಪುರದಲ್ಲಿರುವ ಒಂದು ಖಾಸಗಿ ರೆಸಾರ್ಟ್ನಲ್ಲಿ ವಿವಾಹ ನಡೆದಿದೆ. ಸಾಕಷ್ಟು ಸೆಲೆಬ್ರಿಟಿಗಳು ಮದುವೆಗೆ ಆಗಮಿಸಿ ನೂತನ ವಧು ವರರಿಗೆ ಶುಭ ಕೋರಿದ್ದಾರೆ.
ಇನ್ನೂ ಮದುವೆಗೂ ಹಿಂದಿನ ದಿನ ಬುಧವಾರ ನಡೆದ ಹಳದಿ ಶಾಸ್ತ್ರದ ಫೋಟೋಗಳು ವೈರಲ್ ಆಗಿವೆ. ಹಳದಿ ಶಾಸ್ತ್ರದಲ್ಲಿ ಭಾವಿ ದಂಪತಿಗಳು ಹಳದಿ ಉಡುಗೆಯಲ್ಲೇ ಕಾಣಿಸಿಕೊಂಡಿದ್ದಾರೆ. ಸುತ್ತಲೂ ಸೂರ್ಯಕಾಂತಿ ಹೂವಿನ ಅಲಂಕಾರ ಈ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿದೆ. ಹಳದಿ ಶಾಸ್ತ್ರದ ವೇಳೆ ಅನುಶ್ರೀ – ರೋಷನ್ ಸು ಫ್ರಂ ಸೋ ಚಿತ್ರದ `ಬಂದರೋ ಬಂದರೋ ಬಾವ ಬಂದರೋ’ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಹಳದಿ ಶಾಸ್ತ್ರದಲ್ಲಿ ಮಿಂಚಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.