ಕೋಲಾರ;- ಕೋಲಾರ ಮಹಿಳಾ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕಳುವಾಗಿದ್ದ ಮಗುವನ್ನು ರಕ್ಷಣೆ ಮಾಡಿದ್ದಾರೆ.ಕೋಲಾರ ಗಡಿ ಭಾಗದ ತಮಿಳುನಾಡಿನ ಬೇರಿಕೆ ಬಳಿ ಮಗುವಿನ ರಕ್ಷಣೆ ಮಾಡಲಾಗಿದೆ.
Advertisement
6 ದಿನದ ಕಂದಮ್ಮ ತಾಯಿ ಮಡಿಲು ಸೇರಿದೆ ಮಗು ಕಳ್ಳತನ ಮಾಡಿದ್ದ ಆರೋಪಿಗಳ ಪೈಕಿ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಮಗುವನ್ನು ರಕ್ಷಣೆ ಮಾಡಿ ತಾಯಿ ಮಡಿಲಿಗೆ ಸೇರಿಸಿದ್ದಾರೆ ಕೋಲಾರ ಜಿಲ್ಲಾ ಆಸ್ಪತ್ರೆಯಿಂದ ಮೂವರು ಮಹಿಳೆಯರು ನಿನ್ನೆ ಮಗು ಕಳ್ಳತನ ಮಾಡಿ ತಮಿಳುನಾಡಿಗೆ ಸಾಗಿಸುತ್ತಿದ್ದರು.
ಕಳ್ಳರ ಜಾಡು ಹಿಡಿದ ಪೊಲೀಸರು ಮಗುವನ್ನು ರಕ್ಷಿಸಿದ್ದಾರೆ. ಓರ್ವ ಮಹಿಳೆಯನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.ಕೋಲಾರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ