ಬೆಂಗಳೂರು:- ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಂಧ್ರ ಹಾಗೂ ಮಹಾರಾಷ್ಟ್ರ ರಾಜ್ಯಗಳು ಅಡ್ಡಿ ಮಾಡುತ್ತಿವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
Advertisement
ವಿಧಾನಸಭೆಯಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಧಿಸೂಚನೆಗೆ ಒಮ್ಮೆ ಆಂಧ್ರ ಪ್ರದೇಶ ಮತ್ತೊಮ್ಮೆ ಮಹಾರಾಷ್ಟ್ರದವರು ಕೇಂದ್ರದ ಮೇಲೆ ಒತ್ತಡ ತಂದು ನಿಲ್ಲಿಸಿದರು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರು ಈ ಯೋಜನೆಯ ಪರವಾಗಿದ್ದು, ಇದಕ್ಕೆ ಅಧಿಸೂಚನೆ ಹೊರಡಿಸಲೇಬೇಕು ಎಂದು ಸಂಬಂಧಪಟ್ಟ ರಾಜ್ಯಗಳ ಸಭೆ ನಡೆಸಲು ಎರಡು ಬಾರಿ ಪ್ರಯತ್ನಿಸಿದರು.
ಆದರೆ ಎರಡು ರಾಜ್ಯದವರು ದೂರವಾಣಿ ಕರೆ ಮಾಡಿ ನಿಲ್ಲಿಸಿದರು. ಕೇಂದ್ರ ಸಚಿವರನ್ನು ನಾನು, ಮುಖ್ಯಮಂತ್ರಿಯವರು ಹಾಗೂ ಕೇಂದ್ರ ಸಚಿವ ಸೋಮಣ್ಣ ಅವರು ಭೇಟಿಯಾಗಿ ಮನವಿ ಸಲ್ಲಿಸಿದ್ದೆವು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ಕೊಟ್ಟಿದ್ದಾರೆ.