ಬೆಂಗಳೂರು: ಅಕ್ರಮವಾಗಿ ವಾಸವಿದ್ದ ಮತ್ತೆ ಮೂವರು ಪಾಕಿಸ್ತಾನದ ಕುಟುಂಬವನ್ನು ಅರೆಸ್ಟ್ ಮಾಡಿದ್ದಾರೆ. ಪೀಣ್ಯದಲ್ಲಿದ್ದ ಪಾಕ್ ಕುಟುಂಬವನ್ನ ಬಂಧಿಸಿದ ಪೊಲೀಸರು ಜಿಗಣಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪಾಕ್ ಪ್ರಜೆಗಳು ಬಂಧನವಾಗುವ ಸಾಧ್ಯತೆ ಇದೆ.
Advertisement
ಬಂಧಿತ ಮೂವರು ಪಾಕ್ ಪ್ರಜೆಗಳಿಗೆ ಸದ್ಯ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಜನ ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿರುವುದು ಗೊತ್ತಾಗಿದೆ. ಹದಿನೈದಕ್ಕೂ ಅಧಿಕ ಮಂದಿ ಮೆಹದಿ ಫೌಂಡೇಷನ್ ಸೇರಿದ್ದರು. ಇವರೆಲ್ಲ ಯೂನಸ್ ಅಲ್ಗೋರ್ ಧರ್ಮ ಗುರುಗಳ ಪರ ಪ್ರಚಾರಕ್ಕಾಗಿ ಆಗಮಿಸಿದ್ದಾರೆ ಎನ್ನಲಾಗಿದೆ.