HomeKarnataka NewsAnekal : ಕನ್ನಡ ಮಾತಾಡಿ ಎಂದಿದ್ದಕ್ಕೆ ಕಿರಿಕ್ ಮಾಡಿದ್ದ SBI ಬ್ಯಾಂಕ್ ಮ್ಯಾನೇಜರ್ ವರ್ಗಾವಣೆ!

Anekal : ಕನ್ನಡ ಮಾತಾಡಿ ಎಂದಿದ್ದಕ್ಕೆ ಕಿರಿಕ್ ಮಾಡಿದ್ದ SBI ಬ್ಯಾಂಕ್ ಮ್ಯಾನೇಜರ್ ವರ್ಗಾವಣೆ!

For Dai;y Updates Join Our whatsapp Group

Spread the love

ಬೆಂಗಳೂರು: ಚಂದಾಪುರ ಎಸ್‌ಬಿಐ ಬ್ಯಾಂಕ್‌ನ ಮಹಿಳಾ ಅಧಿಕಾರಿಯೊಬ್ಬರು ಕನ್ನಡದಲ್ಲಿ ವ್ಯವಹರಿಸದ ಕಾರಣ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಕನ್ನಡಪರ ಸಂಘಟನೆಗಳು ಬ್ಯಾಂಕ್‌ಗೆ ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿದ್ದವು.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಎಸ್‌ಬಿಐ ಶಾಖೆಯ ಸಿಬ್ಬಂದಿ, ತಕ್ಷಣವೇ ಮಧ್ಯಪ್ರವೇಶಿಸಿ, ಆ ಮಹಿಳಾ ಅಧಿಕಾರಿಯಿಂದ ಕನ್ನಡದಲ್ಲೇ ಕ್ಷಮೆ ಕೋರುವಂತೆ ಮಾಡಿದ್ದಾರೆ.

ಅದಲ್ಲದೆ ನೇಜರ್‌ನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕನ್ನಡಿಗರ ಹೋರಾಟಕ್ಕೆ ಹೆದರಿ ಮಂಗಳವಾರ ರಾತ್ರಿಯೇ ಮ್ಯಾನೇಜರ್‌ನನ್ನು ಟ್ರಾನ್ಸ್‌ಫರ್‌ ಮಾಡಲಾಗಿದೆ. ಮಹಿಳಾ ಮ್ಯಾನೇಜರ್‌ನನ್ನು ಹೊರ ರಾಜ್ಯಕ್ಕೆ ವರ್ಗಾವಣೆಗೊಳಿಸುವಂತೆ ಆದೇಶ ನೀಡಲಾಗಿದೆ ಎಂದು ಎಸ್‌ಬಿಐ ಮೂಲಗಳು ತಿಳಿಸಿವೆ.

ಗ್ರಾಹಕರೊಬ್ಬರು ಕೆಲಸದ ನಿಮಿತ್ತ ಬೆಂಗಳೂರು ಹೊರವಲಯದ ಚಂದಾಪುರ ಎಸ್‌ಬಿಐ ಬ್ಯಾಂಕ್‌ಗೆ ಹೋದಾಗ ಕನ್ನಡ ಮಾತನಾಡುವಂತೆ ಮಹಿಳಾ ಬ್ಯಾಂಕ್ ಮ್ಯಾನೇಜರ್ ಬಳಿ ಕೇಳಿದ್ದಾರೆ.

ಆದರೆ ಕನ್ನಡ ಮಾತನಾಡಲು ಒಪ್ಪದ ಮಹಿಳಾ ಮ್ಯಾನೇಜರ್ ಗ್ರಾಹಕನಿಗೆ ಹಿಂದಿಯಲ್ಲಿ ಮಾತನಾಡುವಂತೆ ಅವಾಜ್ ಹಾಕಿದ್ದು, ಇದು ಭಾರತ.. ಬರೀ ಕರ್ನಾಟಕ ಮಾತ್ರ ಅಲ್ಲ. ನಾನು ಯಾವತ್ತೂ ಕನ್ನಡವನ್ನೇ ಮಾತಾಡಲ್ಲ. ಏನೇ ಆದರೂ ಅಂತ ಹೇಳುವ ಮೂಲಕ ಕನ್ನಡಿಗರನ್ನು ಕೆರಳಿಸಿದ್ದರು.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!