ಆನೇಕಲ್: ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ವಿದ್ಯುತ್ ತಗುಲಿ ಯುವ ಇಂಜಿನಿಯರ್ ಮೃತಪಟ್ಟಿರುವ ಘಟನೆ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದ ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ನಡೆದಿದೆ. ಕೌಶಿಕ್ (27) ಮೃತ ದುರ್ದೈವಿಯಾಗಿದ್ದು,
Advertisement
ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ವಿದ್ಯುತ್ ತಗಲಿದೆ. ಕೂಡಲೆ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ಅವರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.