Breaking News: ಅಂಗನವಾಡಿ ‌ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಎಸ್ಕೇಪ್ ಆದ ಕಳ್ಳ!

0
Spread the love

ಶಿವಮೊಗ್ಗ:- ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಬೈಲಿನಲ್ಲಿ ಅಂಗನವಾಡಿಗೆ ನುಗ್ಗಿದ ಕಳ್ಳನೊಬ್ಬ ಅಂಗನವಾಡಿ ‌ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಘಟನೆ ಜರುಗಿದೆ.

Advertisement

ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ದ ಖತರ್ನಾಕ್​ ಖದೀಮನೊಬ್ಬ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಎಂಬುವರನ್ನು ಬೆದರಿಸಿ 42 ಗ್ರಾಂ ತೂಕದ ಸುಮಾರು 3 ಲಕ್ಷದ 20 ಸಾವಿರ ಮೌಲ್ಯದ ಮಾಂಗಲ್ಯ ಸರವನ್ನು ಎಗರಿಸಿದ್ದಾನೆ.

ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಧ್ಯ ಪೊಲೀಸರಿಂದ ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here