ಗದಗ: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯ ಅಂಜುಮನ್ ಕಮಿಟಿ ಪದಾಧಿಕಾರಿಗಳ ಆಯ್ಕೆಗೆ ಸೆಪ್ಟೆಂಬರ್ 28ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಅಧಿಕಾರಿ ತೌಸಿಫ್ ಅಹ್ಮದ ಮಕಾನದಾರ್ ತಿಳಿಸಿದರು.
ಗುರುವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 6195 ಜನ ನೋಂದಣಿ ಮಾಡಿಕೊಂಡಿದ್ದು, ಈಗಾಗಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದೆ. ಸೆಪ್ಟೆಂಬರ್ 1 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.
ಸೆಪ್ಟೆಂಬರ್ 8 ರಿಂದ 15 ರವರೆಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಾಮಪತ್ರಗಳ ಸಲ್ಲಿಕೆ, ಸೆಪ್ಟೆಂಬರ್ 16ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ, ಸೆ. 17 ರಂದು ನಾಮಪತ್ರ ಹಿಂಪಡೆಯುವ ಮತ್ತು ಚುನಾವಣೆಗೆ ಸ್ಪರ್ಧಿಸುವ ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ಹಾಗೂ ಚಿಹ್ನೆಗಳ ಹಂಚಿಕೆ ನಡೆಯಲಿದೆ.
ಸಪ್ಟಂಬರ್ 28ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4:00 ವರೆಗೆ ಮತದಾನ ನಡೆಯಲಿದೆ. ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣೆ ಅಧಿಕಾರಿ ಮಾಹಿತಿ ನೀಡಿದರು.
ನಾಮಪತ್ರ ಸಲ್ಲಿಕೆ, ಪರಿಶೀಲನೆ, ಮತ್ತು ಚಿಹ್ನೆಗಳ ಹಂಚಿಕೆ ಸಹಿತ ಎಲ್ಲ ಪ್ರಕ್ರಿಯೆ ಜಿಲ್ಲಾ ವಕ್ಫ್ ಬೋರ್ಡ್ ಕಚೇರಿಯಲ್ಲಿ ನಡೆಯಲಿದೆ. ಮತದಾನ ಮತ್ತು ಮತ ಎಣಿಕೆ ಕಾರ್ಯ ಮುನ್ಸಿಪಲ್ ಕಾಲೇಜಿನಲ್ಲಿ ನಡೆಯಲಿದೆ ಎಂದು ತೌಸಿಫ್ ಅಹ್ಮದ್ ಮಕಾನದಾರ ತಿಳಿಸಿದರು.