ಗದಗ: ಅಕ್ರಮವಾಗಿ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಅನ್ನ ಭಾಗ್ಯ ಅಕ್ಕಿ ವಶಕ್ಕೆ ಪಡೆದಿರುವ ಘಟನೆ ಗದಗ ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ನಡೆದಿದೆ.
Advertisement
ಆಹಾರ ಇಲಾಖೆ ಹಾಗೂ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಿ, ಸುಮಾರು 50 ಕೆಜಿ ತೂಕದ ಒಂದು ಸಾವಿರಕ್ಕೂ ಹೆಚ್ಚು ಚೀಲಗಳು ವಶಕ್ಕೆ ಪಡೆಯಲಾಗಿದೆ.
ತೆಲಂಗಾಣ ಮೂಲದ TS 07, UN 5566 ಲಾರಿಯು ಗದಗ ತಾಲೂಕಿನ ಹುಲಕೋಟಿ ಗ್ರಾಮದಿಂದ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ವೇಳೆ, ಅಧಿಕಾರಿಗಳು ದಾಳಿ ನಡೆಸಿದ್ದು, ಲಾರಿ ವಶಕ್ಕೆ ಪಡೆದು ಚಾಲಕನ ವಿಚಾರಣೆ ನಡೆಸುತ್ತಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.