ವಿಜಯಸಾಕ್ಷಿ ಸುದ್ದಿ, ಗದಗ : ನಗರದ ಮನೋರಮಾ ಕಾಲೇಜಿನ ಬಿಸಿಎ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಹಾಗೂ ಪಾರಿತೋಷಕ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಚ್‌ಸಿಇಸ್ ಕಾಲೇಜಿನ ಬಿಸಿಎ ವಿಭಾಗದ ಪ್ರಾಚಾರ್ಯರಾದ ಕವಿತಾ ವಿಭೂತಿ ಮಾತನಾಡಿ, ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಒಳ್ಳೆಯ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡು ತಂದೆ-ತಾಯಿಯ ಪ್ರೀತಿಗೆ ಪಾತ್ರರಾಗಿ ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಸ್. ಹಿರೇಮಠ ಮಾತನಾಡಿ, ತಂತ್ರಜ್ಞಾನ ಯುಗದಲ್ಲಿ ವೈಜ್ಞಾನಿಕ ದೃಷ್ಟಿಯಿಂದ, ಛಲದಿಂದ ಗುರಿಯತ್ತ ಸಾಗುತ್ತಾ ಸ್ಪರ್ಧಾಲೋಕದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಹಾರೈಸಿದರು.
ವಿವಿಧ ಸಾಂಘಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಕುಡತರಕರ, ಸಂಜಯಕುಮಾರ ಕುಡತರಕರ, ಚೇತನ ಕುಡತರಕರ, ಸಂಯೋಜಕರಾದ ಪ್ರೊ. ಸವಿತಾ ಪೂಜಾರ, ಪ್ರೊ. ಅಲ್ವಿನಾ ಡಿ, ಪ್ರೊ. ಚೈತ್ರಾ ಡಿ, ಪ್ರೊ. ಶಾಹಿದಾ ಶಿರಹಟ್ಟಿ, ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೀರ್ತೀ ಹಾಗೂ ರಕ್ಷಿತಾ ಅಬ್ಬಿಗೇರಿ ಕಾರ್ಯಕ್ರಮ ನಿರೂಪಿಸಿದರು.