ವಿಜಯಸಾಕ್ಷಿ ಸುದ್ದಿ, ಗದಗ : ರಾಷ್ಟ್ರ ಪ್ರಗತಿಯಲ್ಲಿ ಯುವಕರ ಪಾತ್ರ ಅವಶ್ಯಕವಾಗಿದ್ದು, ಸೇವಾ ಮನೋಭಾವನೆಯನ್ನು ಬೆಳೆಸಿಕೊಳ್ಳಿ. ತಂದೆ-ತಾಯಿಯರ ಸೇವೆ ಮಾಡುವುದರೊಂದಿಗೆ ನಮಗಾಗಿ ಅಲ್ಲದೇ ಸಮಾಜಕ್ಕಾಗಿ ದುಡಿಯಲು ಶ್ರಮವಹಿಸಿ. ಪಠ್ಯ ಚಟುವಟಿಕೆಗಳೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಪಾಲ್ಗೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಿ ಎಂದು ಸರ್ಕಾರಿ ಮಹಿಳಾ ಪದವಿ ಮಹಾವಿದ್ಯಾಲಯ ಪ್ರಾಚಾರ್ಯ ಎಮ್.ವಿ. ಹಿರೇಮಠ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಗರದ ಮನೋರಮಾಬಾಯಿ ಮೋಹನ್ ಕುಡತರಕರ್ ಫೌಂಡೇಶನ್‌ನ ಮನೋರಮಾ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಹಾಗೂ ಪಾರಿತೋಷಕ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಾಚಾರ್ಯ ಬಿ.ಎಸ್ ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ಸೃಜನಾತ್ಮಕತೆಯನ್ನು ಹೆಚ್ಚಿಸಿಕೊಳ್ಳಿ ಎಂದರು. ವಿವಿಧ ಸಾಂಘಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಣೆ ಮಾಡಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಚೇರಮನ್ ಎನ್.ಎಮ್. ಕುಡತರಕರ ವಹಿಸಿದ್ದರು.
ಈ ಸಂಧರ್ಭದಲ್ಲಿ ಆಡಳಿತಾಧಿಕಾರಿಗಳಾದ ಕಿಶೋರ ಮುದಗಲ್ಲ, ಸಂಸ್ಥೆಯ ನಿರ್ದೇಶಕರಾದ ಮಂಜುನಾಥ ಕುಡತರಕರ, ಸಂಜಯಕುಮಾರ ಕುಡತರಕರ, ಚೇತನ ಕುಡತರಕರ, ಸಂಯೋಜಕರಾದ ಪ್ರೊ. ಅಲ್ವಿನಾ ಡಿ, ಪ್ರೊ. ಚೈತ್ರಾ ಡಿ., ಪ್ರೊ. ಸವಿತಾ ಪೂಜಾರ, ಪಿಯುಸಿ ಸಂಯೋಜಕರಾದ ಪ್ರೊ. ಶಾಹಿದಾ ಶಿರಹಟ್ಟಿ ಹಾಗೂ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.