ಮಳೆ ಅಬ್ಬರ: ನಾಳೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ!

0
Spread the love

ಬೆಂಗಳೂರು:– ರಾಜಧಾನಿ ಬೆಂಗಳೂರು ಸೇರಿ ರಾಜ್ಯದಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಧಾರವಾಡ, ಕೊಡಗು ಜಿಲ್ಲೆಗಳಿಗೆ ರಜೆ ಘೊಷಿಸಲಾಗಿದೆ ಎನ್ನಲಾಗಿದೆ.

Advertisement

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದ್ರೂ ಬಿರುಗಾಳಿ ಹಿನ್ನೆಲೆ ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್‌.ಆರ್‌.ಪುರ ಹಾಗೂ ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ

ಕೊಡಗು ಜಿಲ್ಲೆಯಾದ್ಯಂತ ಭಾರಿ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಜಿಲ್ಲೆಯ ಶಾಲಾ‌ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಧಾರವಾಡ ಜಿಲ್ಲೆಯಲ್ಲಿ ಮಳೆ ಹಾಗೂ ಶೀತ ಗಾಳಿ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಡಿಸಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ನಿನ್ನೆ ಮತ್ತು ಇಂದು ರಜೆ ನೀಡಲಾಗಿತ್ತು. ಆದರೆ ಮಳೆ ಮತ್ತು ಶೀತ ಗಾಳಿ ಇರುವುದರಿಂದ ನಾಳೆಯೂ ರಜೆ ಮುಂದುವರೆಸಲಾಗಿದೆ. ಮುಂದಿನ ಸಾರ್ವಜನಿಕ ರಜಾ ದಿನಗಳಲ್ಲಿ ಹೆಚ್ಚುವರಿ ವರ್ಗಗಳನ್ನು ನಡೆಸುವಂತೆ ಸೂಚನೆ ನೀಡಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ನಾಳೆಯೂ ಜಿಲ್ಲೆಯಲ್ಲಿ ರಜೆ ಮುಂದುವರಿಕೆ ಆಗಿದೆ. ಮಕ್ಕಳ ಹಿತದೃಷ್ಟಿಯಿಂದ ಪದವಿ ಪೂರ್ವ ಕಾಲೇಜು ಹಾಗೂ ಅಂಗನವಾಡಿ, ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್​ರಿಂದ ರಜೆ‌ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here