ವಿಜಯಸಾಕ್ಷಿ ಸುದ್ದಿ, ಗದಗ : ನಗರದ ತಾಜ್‌ನಗರ ಹಿದಾಯತ್ ಪೂರ್ವ ಪ್ರಾಥಮಿಕ ಹಾಗೂ ಜೆ.ಯು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ, ಮಕ್ಕಳ ವೇಷಭೂಷಣ ಸ್ಪರ್ಧೆ ಹಾಗೂ ೮ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಜರುಗಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಡಾ.ರೊನಾಲ್ಡೋ ಖಾನಾಪುರ, ಅತಿಥಿಗಳಾಗಿ ಪೂಜಾ ಬೇವೂರ್ ಆಗಮಿಸಿದ್ದರು. ಸಂಸ್ಥೆಯ ಕಾರ್ಯದರ್ಶಿ ಜನಾಬ ಕೆ.ಐ. ಶೇಖ ಪ್ರಸ್ತಾವಿಕ ನುಡಿಗಳನ್ನಾಡಿ, ಶಾಲೆಯ ಶೈಕ್ಷಣಿಕ ವರ್ಷದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರೊಂದಿಗೆ ತಮ್ಮ ಪ್ರತಿಭೆಯನ್ನು ಬೆಳೆಸಿಕೊಂಡು ತಮ್ಮ ಕಲಿಕಾ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಹೇಳಿದರು.
ಸಂಸ್ಥೆಯ ಅಧಕ್ಷ ಜುನೈದ್ ಉಮಚಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಮುಂಬರುವ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾಗುವುದರೊಂದಿಗೆ ತಮ್ಮ ಪ್ರತಿಭೆ ಹಾಗೂ ಶಾಲೆಯ ಘನತೆಯನ್ನು ಹೆಚ್ಚಿಸಲಬೇಕೆಂದರು.
ಈ ಸಂದರ್ಭದಲ್ಲಿ ಪ್ರಧಾನ ಗುರು ಅಬ್ದುಲ್ ಹಫೀಜ್ ಉಪಸ್ಥಿತರಿದ್ದರು. ನಿರ್ಮಲಾ ಗಡಾದ ಸ್ವಾಗತಿಸಿದರು. ಸಹ ಶಿಕ್ಷಕಿ ಹೇಮಾ ಐ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು. ರೇಶ್ಮಾ ಟಕ್ಕೆದ ವಂದಿಸಿದರು.