HomeGadag Newsವಾರ್ಷಿಕ ಸರ್ವ ಸಾಧಾರಣ ಮಹಾಸಭೆ

ವಾರ್ಷಿಕ ಸರ್ವ ಸಾಧಾರಣ ಮಹಾಸಭೆ

For Dai;y Updates Join Our whatsapp Group

ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಹಾತಲಗೇರಿ ರಸ್ತೆಯ ನಿಸರ್ಗ ಬಡಾವಣೆಯ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದ ಶ್ರೀ ಮೈಲಾರಲಿಂಗೇಶ್ವರ ಸೇವಾ ಟ್ರಸ್ಟ್ನ 2023-2024ನೇ ಸಾಲಿನ ಮೂರನೇ ವಾರ್ಷಿಕ ಸರ್ವ ಸಾಧಾರಣ ಮಹಾಸಭೆಯನ್ನು ಆಗಸ್ಟ್ 25ರ ಸಾಯಂಕಾಲ 4 ಗಂಟೆಗೆ ದೇವಸ್ಥಾನದ ಆವರಣದಲ್ಲಿ ಟ್ರಸ್ಟ್ ಅಧ್ಯಕ್ಷ ಎಸ್.ಬಿ. ಸಿದ್ದನಗೌಡ್ರ ಇವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ.

ಟ್ರಸ್ಟ್ನ ಗೌರವಾಧ್ಯಕ್ಷ ಎಮ್.ಎನ್. ಜಾಲಮ್ಮನವರ, ಉಪಾಧ್ಯಕ್ಷ ಎಚ್.ಎಸ್. ಕುರಿ ಉಪಸ್ಥಿತರಿರುವರು. ಸಭೆಯಲ್ಲಿ ಹೊಸದಾಗಿ ಸದಸ್ಯರನ್ನು ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು. ಕಾರಣ ಟ್ರಸ್ಟಿನ ಸಕಲ ಪದಾಧಿಕಾರಿಗಳು, ನಿರ್ದೇಶನ ಮಂಡಳಿಯ ಸರ್ವ ಸದಸ್ಯರು, ಮಹಾದಾನಿಗಳು, ಸಕಲ ಸದ್ಭಕ್ತ ಮಂಡಳಿಯವರು ಭಾಗವಹಿಸಿ ಸೂಕ್ತ ಸಲಹೆ-ಸೂಚನೆಗಳನ್ನು ನೀಡಬೇಕೆಂದು ಟ್ರಸ್ಟ್ನ ಕಾರ್ಯದರ್ಶಿಗಳಾದ ವಾಯ್. ಡಿ. ಸುರಕೋಡ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

E-Paper

E-paper

Must Read

spot_img