HomeKarnataka NewsKPSC ಹಗರಣದಲ್ಲಿ ಮತ್ತೊಂದು ಬಿಗ್ ಟ್ವಿಸ್ಟ್! 10 ತಿಂಗಳಲ್ಲಿ ₹8 ಕೋಟಿ ಆಸ್ತಿ ಖರೀದಿ ಮಾಡಿದ...

KPSC ಹಗರಣದಲ್ಲಿ ಮತ್ತೊಂದು ಬಿಗ್ ಟ್ವಿಸ್ಟ್! 10 ತಿಂಗಳಲ್ಲಿ ₹8 ಕೋಟಿ ಆಸ್ತಿ ಖರೀದಿ ಮಾಡಿದ ಕನ್ನಾಳೆ?

For Dai;y Updates Join Our whatsapp Group

ಬೆಂಗಳೂರು:ಕೆಪಿಎಸ್‌ಸಿ ನೇಮಕಾತಿ ಹಗರಣದಲ್ಲಿ ದಿನಕ್ಕೊಂದು ಹೊಸ ಮಾಹಿತಿ ಹೊರಬರುತ್ತಿದೆ. ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಸವರಾಜ್ ಕನ್ನಾಳೆ, ಅಭ್ಯರ್ಥಿಗಳಿಗಾಗಿ ದೇವನಹಳ್ಳಿ ಬಳಿ ಐಷಾರಾಮಿ ವಿಲ್ಲಾ ಬುಕ್ ಮಾಡಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಲಭ್ಯವಾಗಿದೆ ಎನ್ನಲಾಗಿದೆ.

ತನಿಖೆಯಲ್ಲಿ ಲಭ್ಯವಾಗಿರುವ ಮಾಹಿತಿ ಪ್ರಕಾರ, ಕನ್ನಾಳೆ 20 ಅಭ್ಯರ್ಥಿಗಳಿಂದ ಹಣ ಪಡೆದಿದ್ದಾನೆ ಎನ್ನಲಾಗಿದೆ. ಜನವರಿ 8 ಮತ್ತು 9ರಂದು ದೇವನಹಳ್ಳಿಯ ಸಿಂಗಹಳ್ಳಿ ಸಮೀಪದ ಆರ್ಕೀಡ್ ನಿರ್ವಾಣದಲ್ಲಿ ಎರಡು ದಿನಗಳ ಕಾಲ ವಿಲ್ಲಾ ಬಾಡಿಗೆಗೆ ಪಡೆದಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ವಿಲ್ಲಾ ಬಾಡಿಗೆಗಾಗಿ ತನ್ನ ಯುಪಿಐ ಖಾತೆಯಿಂದ 37 ಸಾವಿರದ 800 ರೂಪಾಯಿ ಪಾವತಿಸಿದ್ದಾನೆ ಎಂದು ಹೇಳಲಾಗಿದೆ.

ಅಷ್ಟೇ ಅಲ್ಲ, ವಿಲ್ಲಾದಲ್ಲಿ ಅಭ್ಯರ್ಥಿಗಳಿಗೆ ತರಬೇತಿ ನೀಡಿ, ನಂತರ ಬಸ್ ಮೂಲಕ ಪರೀಕ್ಷಾ ಕೇಂದ್ರಗಳಿಗೆ ಕರೆದೊಯ್ಯಲಾಗಿತ್ತು ಎಂಬ ಆರೋಪವೂ ಕೇಳಿಬಂದಿದೆ. ಇನ್ನು ಕೇವಲ ಹತ್ತು ತಿಂಗಳ ಅವಧಿಯಲ್ಲಿ ಕನ್ನಾಳೆ ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಖರೀದಿಸಿದ್ದಾನೆ ಎಂಬ ಮಾಹಿತಿ ತನಿಖೆಯಲ್ಲಿ ಲಭ್ಯವಾಗಿದೆ ಎನ್ನಲಾಗಿದೆ.

ಆಸ್ತಿ ಖರೀದಿಗೆ ನಗದು ಹಣ ಬಳಸಲಾಗಿತ್ತು ಎಂಬ ಆರೋಪವಿದ್ದು, ಹಣದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ. ಮತ್ತೊಂದೆಡೆ, ಭಾಲ್ಕಿಯ ಓಂ ಲಕ್ಷ್ಮಿ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷ ಓಂಕಾರ್ ಮೂಲಕ ನಗದು ಹಣವನ್ನು ಲೆಕ್ಕಪತ್ರದಲ್ಲಿ ತೋರಿಸುವ ವ್ಯವಸ್ಥೆ ಮಾಡಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ.

ಈ ಹಣಕಾಸು ವ್ಯವಹಾರಗಳ ಹಿಂದಿನ ಸತ್ಯಾಸತ್ಯತೆ ಹಾಗೂ ಸಂಬಂಧಪಟ್ಟವರ ಪಾತ್ರವನ್ನು ತನಿಖಾಧಿಕಾರಿಗಳು ಪರಿಶೀಲಿಸಬೇಕಿದೆ. ಇದೇ ವೇಳೆ ಕೆಪಿಎಸ್‌ಸಿ ಅಭ್ಯರ್ಥಿಗಳೊಂದಿಗೆ ಸಂವಾದ ನಡೆಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಪಶುವೈದ್ಯಕೀಯ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img