ಹುಬ್ಬಳ್ಳಿ,: ಭಾರತೀಯ ಜನತಾ ಪಕ್ಷ ಹಾಗೂ ಜೆಡಿಎಸ್ ಮೈತ್ರಿ ಬೆನ್ನಲ್ಲೇ ಇತ್ತ ಕಾಂಗ್ರೆಸ್ನಿಂದ ಕರ್ನಾಟಕದಲ್ಲಿ ಆಪರೇಷನ್ ಹಸ್ತ ಬಿರುಸುಗೊಂಡಿದೆ.
Advertisement
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್, ವಿಧಾನಸಭೆ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋಲು ಕಂಡಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರುಗಳಿಗೆ ಗಾಳ ಹಾಕಿದೆ.
ಈಗಾಗಲೇ ಕೆಲ ಭಾರತೀಯ ಜನತಾ ಪಕ್ಷದ ಮಾಜಿ ಶಾಸಕರುಗಳು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪನವರ ಸಂಬಂಧಿ , ಮಾಜಿ ಶಾಸಕ ಚಿಕ್ಕನಗೌಡರ್ ಭಾರತೀಯ ಜನತಾ ಪಕ್ಷ ತೊರೆದು ಕಾಂಗ್ರೆಸ್ನತ್ತ ಸೇರ್ಪಡೆಗೆ ಮುಂದಾಗಿದ್ದಾರೆ.