ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಡಿವೈಎಸ್‌ಪಿ ಕಚೇರಿಯಲ್ಲಿ ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿಗೆ ಡಿವೈಎಸ್‌ಪಿ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿತ್ತು.. ಈ ಘಟನೆಯಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ. ಇದರ ಬೆನ್ನಲ್ಲೇ ಡಿವೈಎಸ್‌ಪಿ ರಾಮಚಂದ್ರಪ್ಪ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
Advertisement
ಮತ್ತೊಬ್ಬ ಸಂತ್ರಸ್ತ ಮಹಿಳೆ ಮಧುಗಿರಿ ಪೋಲಿಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಡಿವೈಎಸ್ ಪಿ ರಾಮಚಂದ್ರಪ್ಪ ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮತ್ತೊಂದು ದೂರು ದಾಖಲು ಹಿನ್ನೆಲೆಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ.