Belagavi: ಮತ್ತೊಂದು ಪೈಶಾಚಿಕ ಕೃತ್ಯ : ಇಬ್ಬರು ಬಾಲಕಿಯನ್ನು ಅಪಹರಿಸಿ ಗ್ಯಾಂಗ್ ರೇಪ್.!

0
Spread the love

ಬೆಳಗಾವಿ: ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದರ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಬಾಲಕಿಯರ ಮೇಲೆ, ಮೂರು ಯುವಕರು ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.

Advertisement

ಘಟನೆ ಸಂಬಂಧ ಆರೋಪಿಗಳನ್ನು ಬಂಧೀಸಲಾಗಿದೆ. ಅಭಿಷೇಕ್, ಆದಿಲ್ ಜಮಾದಾರ್ ಮತ್ತು ಚಾಲಕ ಕೌತುಕ್ ಬಡಿಗೇರ ಬಂಧಿತ ಆರೋಪಿಗಳಾಗಿದ್ದು, ಮೂವರು ಸೇರಿಕೊಂಡು ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ.

ಪ್ರಕರಣ ಸಂಬಂಧ ಬೆಳಗಾವಿ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, “ಆರೋಪಿ ಅಭಿಷೇಕ್ ಇನ್‌ಸ್ಟಾಗ್ರಾಂ ಮೂಲಕ ಓರ್ವ ಬಾಲಕಿಗೆ ಪರಿಚಯವಾಗಿದ್ದಾನೆ. ಸವದತ್ತಿಗೆ ಹೋಗುತ್ತಿದ್ದೇನೆ ನೀನು ಬಾ ಎಂದು ಬಾಲಕಿಗೆ ಪುಸಲಾಯಿಸಿದ್ದಾನೆ. ಈತನ ಮಾತು ನಂಬಿ, ನೊಂದ ಬಾಲಕಿ ತನ್ನ ಸ್ನೇಹಿತೆಯನ್ನ ಕರೆದುಕೊಂಡು, ಇಬ್ಬರೂ ಒಟ್ಟಾಗಿ ಹಾರೂಗೇರಿ ಬಸ್ ನಿಲ್ದಾಣದಕ್ಕೆ ಹೋಗಿದ್ದಾರೆ” ಎಂದು ಹೇಳಿದರು.

ಅಲ್ಲಿ, ಆರೋಪಿ ಅಭಿಷೇಕ ಸಂತ್ರಸ್ತ ಬಾಲಕಿಯರನ್ನು ಎರ್ಟಿಗಾ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಎರ್ಟಿಗಾ ಕಾರಿನಲ್ಲಿ ಮೂರೂ ಜನ ಆರೋಪಿಗಳಿದ್ದರು. ಸಂತ್ರಸ್ತ ಬಾಲಕಿಯರನ್ನು ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದ ಬಳಿಯ ಗುಡ್ಡಗಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಜನವರಿ 3ರಂದು ಮಧ್ಯಾಹ್ನದ ವೇಳೆಗೆ ಗುಡ್ಡದಲ್ಲಿ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ್ದಾರೆ” ಎಂದು ತಿಳಿಸಿದರು.

ದೂರು ಕೊಟ್ಟ ಬಾಲಕಿ ಮೇಲೆ ಅಭಿಷೇಕ ಬಳಿಕ ಕಾರು ಚಾಲಕ ಕೌತುಕ್ ಬಡಿಗೇರಿ ಅತ್ಯಾಚಾರವೆಸಗುತ್ತಾರೆ. ಇದೇ ವೇಳೆ ಕಾರಿನಲ್ಲಿ ಕುಳಿತಿದ್ದ ಬಾಲಕಿ ಮೇಲೆ ಆದಿಲ್ ಜಮಾದಾರ್ ಅತ್ಯಾಚಾರವೆಸಗುತ್ತಾನೆ. ಆರೋಪಿಗಳು ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಂಡು, ಬಳಿಕ ಬ್ಲ್ಯಾಕ್ ಮೇಲ್ ಮಾಡಿದ್ದಾರೆ” ಎಂದರು.

ಆರೋಪಿತರು ಸಂತ್ರಸ್ತ ಬಾಲಕಿಯರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಮುಂದಿನ ವಾರ ಗೋವಾಕ್ಕೆ ಬರಬೇಕು ಅಂತ ಬ್ಲ್ಯಾಕ್ ಮೇಲ್ ಮಾಡಿದರು. ಬರದಿದ್ರೇ ವಿಡಿಯೋ ವೈರಲ್ ಮಾಡುತ್ತೇವೆ ಎಂದು ಹೆದರಿಸಿದು. ದೂರು ಕೊಟ್ಟರೇ ಕೊಲೆ ಮಾಡುತ್ತೇವೆ ಅಂತ ಬೆದರಿಕೆ ಹಾಕಿದ್ದರು” ಎಂದು ಹೇಳಿದರು.

“ಸಂತ್ರಸ್ತ ಬಾಲಕಿಯರು ಮನೆಯಲ್ಲಿ ಈ ವಿಚಾರ ತಿಳಿಸಿದ್ದಾರೆ. ಬಳಿಕ, ಸಂತ್ರಸ್ತ ಬಾಲಕಿ ತಮ್ಮ ಸೋದರ ಸಂಬಂಧಿ ಜೊತೆಗೆ ಬಂದು ಜನವರಿ 13ರಂದು ಹಾರೂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ಕೊಟ್ಟ 24 ಗಂಟೆಯೊಳಗೆ ಇಬ್ಬರು ಆರೋಪಿಯನ್ನ ಬಂಧಿಸಲಾಗಿದೆ. ನಂತರ, ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ” ಎಂದರು.


Spread the love

LEAVE A REPLY

Please enter your comment!
Please enter your name here