ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಜೆಡಿಎಸ್ ಆಫೀಸ್ ಪಕ್ಕದಲ್ಲಿರುವ ಪಾರ್ಕಿಂಗ್ ಜಾಗದಲ್ಲಿ ಬೆಂಕಿ ಬಿದ್ದು, ಸೀಜ್ ಮಾಡಿದ್ದ ಒಟ್ಟು 100 ಕ್ಕೂ ಹೆಚ್ವು ಬೈಕ್ ಗಳು ಕಾರುಗಳು ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.
Advertisement
ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಮೈದಾನದಲ್ಲಿ ಹುಲ್ಲು, ಗಿಡ ಬೆಳೆದುಕೊಂಡಿತ್ತು. ಇಂದು ಯಾರೋ ಸಿಗರೇಟ್‌ಗಾಗಿ ಬೆಂಕಿ ಕಡ್ಡಿ ಗೀರಿ ಎಸೆದು ಹೋಗಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು,
ಈಗಾಗಲೇ ಐದು ಕಾರು, ಐದು ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಹೋಗಿವೆ. ಮತ್ತಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ನಂದಿಸುವ ಕೆಲಸ ಮಾಡುತ್ತಿದ್ದಾರೆ.