ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ: ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ

0
Spread the love

ಬೆಂಗಳೂರು ಗ್ರಾಮಾಂತರ: ಹೆಣ್ಣುಮಕ್ಕಳಿಗೆ ಅಪ್ಪನೇ ಸೂಪರ್ ಹೀರೋ ಎಂಬ ಮಾತುಗಳು ನಾವು ಹಾಗಾಗ ಕೇಳುತ್ತಿರುತ್ತೇವೆ. ಅದರಂತೆ ಹೆಣ್ಣುಮಕ್ಕಳು ಅಪ್ಪನ ಮೇಲೆ ವಿಶೇಷ ಪ್ರೀತಿಯನ್ನು ಇಟ್ಟಿರುತ್ತಾರೆ. ಆದರೆ ಇಲ್ಲಿ ನಡೆದ ಘಟನೆಯೊಂದು ಅಪ್ಪ ಎಂಬ ಪದಕ್ಕೆ ಮಸಿ ಬಳಿದಂತಿದೆ. ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಾಮುಕ ತಂದೆಯೇ ಮಗಳ ಮೇಲೆ ಅತ್ಯಾಚಾರ ಎಸಗಿ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.

Advertisement

ತಂದೆಯಿಂದ ಅತ್ಯಾಚಾರಕ್ಕೊಳಗಾಗಿ ಮತ್ತು ಬೆದರಿಕೆ ಹಾಕಲ್ಪಟ್ಟ ಯುವತಿಯೊಬ್ಬಳು ಮನೆ ಬಿಟ್ಟು ಪಿಜಿಯಲ್ಲಿ ಆಶ್ರಯ ಪಡೆದ ಪ್ರಕರಣ ಇದೀಗ ಕೊನೆಗೂ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ತಂದೆಯೇ ಮಗಳ ಮೇಲೆ ಅತ್ಯಾಚಾರ ಎಸಗಿ, ನಾಗರೀಕ ಸಮಾಜವೇ ತಲೆ ತಗ್ಗಿಸುವಂತಹ ಕೃತ್ಯ ಎಸಗಿದ್ದಾನೆ. 19 ವರ್ಷ ವಯಸ್ಸಿನ ಮಗಳ‌ ಮೇಲೆ ಅತ್ಯಾಚಾರ ಮಾಡಿದ್ದರ ಜತೆಗೆ ಆಕೆಗೆ ಬೆದರಿಕೆಯನ್ನೂ ಹಾಕಿದ್ದಾನೆ. ಸದ್ಯ ಹೊಸಕೋಟೆ ಮಹಿಳಾ ಠಾಣೆ ಪೊಲೀಸರು ಆರೋಪಿ ಮಂಜುನಾಥ್​ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.

ಕಾರು ಚಾಲಕನಾಗಿರುವ ಮಂಜುನಾಥ್​​​ಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು, ಒಂದು ಗಂಡು ಮಗು. ಹಿರಿಯ ಮಗಳ ಮೇಲೆ‌ ಅತ್ಯಾಚಾರ ಮಾಡಿರುವ ಆರೋಪ ಹಾಗೂ ದೂರು ದಾಖಲಾಗಿದೆ. ತಂದೆಯ ಕಾಟ ತಾಳಲಾರದೆ ಯುವತಿ ಪಿಜಿಯಲ್ಲಿ ವಾಸ ಮಾಡುತ್ತಿದ್ದಳು ಎನ್ನಲಾಗಿದೆ. ವಿಷಯ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನೂ ಹಾಕಲಾಗಿತ್ತು. ಹೀಗಾಗಿ ಜೀವ ಭಯದಿಂದ ಯುವತಿ ಮನೆಯಿಂದ ದೂರ ಉಳಿದಿದ್ದಳು. ತಂದೆಯಿಂದಾದ ಅನಾಚರಕ್ಕೆ ನ್ಯಾಯ ಒದಗಿಸುವಂತೆ ಯುವತಿ ಆಗ್ರಹಿಸಿದ್ದು, ಸದ್ಯ ಪೊಲೀಸರಿಂದ ತನಿಖೆ ನಡೆಯುತ್ತಿದೆ.


Spread the love

LEAVE A REPLY

Please enter your comment!
Please enter your name here