ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ: ಬಳ್ಳಾರಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅಪರಿಚಿತನಿಂದ ಅತ್ಯಾಚಾರ

0
Spread the love

ಬಳ್ಳಾರಿ: ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಮುಂಜಾನೆ ತಾನೆ ಬೆಂಗಳೂರಿನಲ್ಲಿ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಮತ್ತು ಹತ್ಯೆ ನಡೆದಿರುವ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಸಂಡೂರು ತಾಲೂಕಿನಲ್ಲಿ ಐದು ವರ್ಷದ ಬಾಲಕಿ ಮೇಲೆ ಅಪರಿಚಿತನೊಬ್ಬ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ.

Advertisement

ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ಎಸಗಿದ್ದಾರೆ.

ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಗಿದೆ ಎಂಬುದು ತಿಳಿದು ಬಂದಿದೆ.

 


Spread the love

LEAVE A REPLY

Please enter your comment!
Please enter your name here