ಕಲಬುರಗಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿರುವ ನೀಚ ಘಟನೆ ಕಲಬುರಗಿ ಇ.ಎಸ್.ಐ ಆಸ್ಪತ್ರೆಯಲ್ಲಿ ನಡೆದಿದೆ. ಸಂಪತ್ ಕಿವಡೇಕರ್ ಅತ್ಯಾಚಾರ ಮಾಡಿದ ಆರೋಪಿಯಾಗಿದ್ದು,
Advertisement
ತಂದೆಗೆ ಒಂದು ವಾರದ ಹಿಂದೆ ಶಸ್ತ್ರಚಿಕಿತ್ಸೆ ನಡೆದಿತ್ತು. ತಾಯಿ ವಿಕಲಚೇತನರಾದ ಕಾರಣ 17 ವರ್ಷದ ಮಗಳು ಆರೈಕೆಗಾಗಿ ಆಸ್ಪತ್ರೆಯಲ್ಲಿರುತ್ತಿದ್ದಳು. ಈ ವೇಳೆ ಅವರದೇ ಗ್ರಾಮದ ಯುವಕನೊಬ್ಬ ಅದೇ ಆಸ್ಪತ್ರೆಯಲ್ಲಿ ಸ್ವಚ್ಛತಾ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದನು.
ಬಾಲಕಿಯ ಪರಿಸ್ಥಿತಿ ದುರುಪಯೋಗ ಮಾಡಿಕೊಂಡು ವೈದ್ಯಕೀಯ ಕಾಲೇಜಿನ ವಿಶ್ರಾಂತಿ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಇನ್ನೂ ಈ ಘಟನೆ ಸಂಬಂಧ ಕಲಬುರಗಿ ವಿವಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿ ಸಂಪತ್ ನನ್ನು ಅರೆಸ್ಟ್ ಮಾಡಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.