ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
29 ವರ್ಷದ ಅಮೃತ್ ಮಂಡಲ್ ಅಲಿಯಾಸ್ ಸಾಮ್ರಾಟ್ ಎಂಬಾತ ರಾಜಧಾನಿ ಢಾಕಾದಿಂದ ಸುಮಾರು ಮೂರೂವರೆ ಗಂಟೆಗಳ ದೂರದಲ್ಲಿರುವ ರಾಜ್ಬರಿ ಜಿಲ್ಲೆಯ ಪಂಗ್ಶಾ ಉಪವಿಭಾಗದಲ್ಲಿ ಬುಧವಾರ ರಾತ್ರಿ ಹತ್ಯೆಯಾಗಿದ್ದಾನೆ. ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳ್ಳಿಗನೊಬ್ಬನ ಮನೆಗೆ ಹೋಗಿದ್ದ ವೇಳೆ ಗ್ರಾಮಸ್ಥರು ಸಾಮ್ರಾಟ್ ಅನ್ನು ಹಿಡಿದು ಥಳಿಸಿದ್ದು, ಪೊಲೀಸರು ಆಸ್ಪತ್ರೆಗೆ ಸಾಗಿಸಿದಾಗ ಆತ ಮೃತಪಟ್ಟಿರುವುದು ದೃಢಪಟ್ಟಿದೆ.
ಈ ಹಿಂದೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಸಾಮ್ರಾಟ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು. ಕೆಲ ದಿನಗಳ ಹಿಂದಷ್ಟೇ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆಯಾದ ಬಳಿಕ ಉದ್ವಿಗ್ನಗೊಂಡಿದ್ದ ಬಾಂಗ್ಲಾದೇಶದ ವಾತಾವರಣದಲ್ಲಿ ಈ ಘಟನೆ ಅಲ್ಪಸಂಖ್ಯಾತರ ಸುರಕ್ಷತೆ ಬಗ್ಗೆ ಮತ್ತಷ್ಟು ಆತಂಕ ಮೂಡಿಸಿದೆ.



