ಮೈಸೂರು:- ಹುಲಿ ದಾಳಿಗೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೆ ಹೆಗ್ಗೂಡಿಲು ಗ್ರಾಮದಲ್ಲಿ ಜರುಗಿದೆ.
Advertisement
ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ಏಕಾಏಕಿ ದಾಳಿ ಮಾಡಿದ ಪರಿಣಾಮ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚೌಡನಾಯಕ (58) ಸ್ಥಳದಲ್ಲಿಯೇ ಸಾವನ್ನಪ್ಪಿರುವ ರೈತ. ರೈತನ ತೊಡೆ, ತಲೆ ಭಾಗವನ್ನು ಹುಲಿ ತೀವ್ರ ಹಾನಿ ಮಾಡಿತ್ತು. ಪರಿಣಾಮ ರೈತ ಸಾವನ್ನಪ್ಪಿದ್ದಾನೆ.
ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಘಟನೆ ಜರುಗಿದೆ.


